ಶನಿವಾರ, ಫೆಬ್ರವರಿ 27, 2021
19 °C

ಲಾರಿ ಡಿಕ್ಕಿ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ಇಲ್ಲಿನ ಬಸ್‌ ನಿಲ್ದಾಣದ ಮುಂದೆ ರಸ್ತೆ ಬದಿ ನಿಂತಿದ್ದ ಮಹಿಳೆಯ ಮೇಲೆ ಲಾರಿ ಹರಿದು ಅವರು ಮೃತ ಪಟ್ಟಿದ್ದಾರೆ.

ಕೋಮಲಾ ಕೆ.(41) ಮೃತ ಮಹಿಳೆ. ಪೀಣ್ಯದಲ್ಲಿರುವ ಸಾಯಿ ಎಕ್ಸ್‌ಪೋರ್ಟ್‌ ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಮಲಾ ಬೆಳಿಗ್ಗೆ ಫ್ಯಾಕ್ಟರಿಗೆ ಹೋಗಲು ಬಸ್ಸು ನಿಲ್ದಾಣಕ್ಕೆ ಬಂದಿದ್ದರು.

ನೀರಿನ ಲಾರಿ ನಿಯಂತ್ರಣ ತಪ್ಪಿ ಕೋಮಲಾ ಅವರ ಮೇಲೆ ಹರಿದಿದೆ.

ತಕ್ಷಣ ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಆ ಮಹಿಳೆ ಮೃತಪಟ್ಟಿದ್ದಾರೆ ಎಂದು ಜಾಲಹಳ್ಳಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕೋಮಲಾ ಅವರಿಗೆ ಇಬ್ಬರು ‍ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾನೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು