‍ಪಿಐಎಲ್‌ಗಳಿಂದ ದೇಶದ ಆರ್ಥಿಕ ವ್ಯವಸ್ಥೆಗೆ ನಷ್ಟ: ಕಪಿಲ್‌ ಸಿಬಲ್‌

ಬುಧವಾರ, ಮಾರ್ಚ್ 20, 2019
23 °C

‍ಪಿಐಎಲ್‌ಗಳಿಂದ ದೇಶದ ಆರ್ಥಿಕ ವ್ಯವಸ್ಥೆಗೆ ನಷ್ಟ: ಕಪಿಲ್‌ ಸಿಬಲ್‌

Published:
Updated:
Prajavani

ಬೆಂಗಳೂರು: ‘ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ತಕರಾರಿನಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಗೆ ನಷ್ಟವುಂಟಾಗುತ್ತಿದೆ’ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಕಪಿಲ್ ಸಿಬಲ್‌ ಆತಂಕ ವ್ಯಕ್ತಪಡಿಸಿದರು.

ಬೆಂಗಳೂರು ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ‘ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಇಂದಿನ ಸನ್ನಿವೇಶ’ ಎಂಬ ವಿಷಯದ ಕುರಿತು ಗುರುವಾರ ಹೈಕೋರ್ಟ್ ವಕೀಲರ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.

‘2ಜಿ ತರಂಗಾಂತರ ಹಾಗೂ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಪರಿಣಾಮ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಉಂಟಾಯಿತು. ಟೆಲಿಕಾಂ ಕ್ಷೇತ್ರದ ಹೂಡಿಕೆದಾರರು ₹ 5 ಲಕ್ಷ ಕೋಟಿ ನಷ್ಟ ಅನುಭವಿಸಿದರು. ಇಂದು ಪಿಐಎಲ್‌ಗಳ ಮೂಲ ಆಶಯವೇ ಮರೆಯಾಗಿದೆ’ ಎಂದರು.

‘ಇತ್ತೀಚಿನ ದಿನಗಳಲ್ಲಿ ವಕೀಲರ ಸಂಘಗಳು ರಾಜಕೀಯ ಪಕ್ಷಗಳ ಗುಂಪುಗಳಾಗಿ ಪರಿವರ್ತನೆ ಆಗುತ್ತಿರುವುದು ವಿಷಾದನೀಯ. ಪ್ರತಿಯೊಬ್ಬ ವಕೀಲರೂ ನ್ಯಾಯಾಂಗದ ಘನತೆ ಕಾಪಾಡುವಲ್ಲಿ ಮಹತ್ವದ ಹೊಣೆ ಹೊತ್ತಿದ್ದಾರೆ. ಇದನ್ನು ವಕೀಲ ವೃಂದ ಅರಿಯಬೇಕು’ ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮಾತನಾಡಿ, ‘ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡುತ್ತಿರುವುದು ಮತ್ತು ಭ್ರಷ್ಟಾಚಾರದ ಆರೋಪಗಳು ನ್ಯಾಯಾಂಗ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತಿವೆ’ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !