‘ನಾನೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ’

ಸೋಮವಾರ, ಮೇ 27, 2019
23 °C
23ರ ನಂತರ ಎಲ್ಲ ಪ್ರಶ್ನೆಗಳಿಗೂ ಉತ್ತರ

‘ನಾನೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ’

Published:
Updated:
Prajavani

ಬೆಂಗಳೂರು: ‘ನಾನು ಕೂಡಾ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಂಗಳವಾರ ಮಾತನಾಡಿ, ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆ ಎಂದಾದರೆ ನಾನು ಕಾಯುತ್ತೇನೆ’ ಎಂದು ಹೇಳಿದಿರು.

‘ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದರಲ್ಲಿ ತಪ್ಪೇನಿದೆ. ನಾನೂ ಅದನ್ನೇ ಬಯಸುತ್ತೇನೆ. ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅವರು ಅನ್ನಭಾಗ್ಯ, ಕ್ಷೀರ ಭಾಗ್ಯದಂಥ ಅನೇಕ ಮಹತ್ವದ ಯೋಜನೆಗಳನ್ನು ಕೊಟ್ಟಿದ್ದಾರೆ. ಬಡವರ ಪರ ಕೆಲಸ ಮಾಡಿದ್ದಾರೆ’ ಎಂದು ನೆನಪಿಸಿದರು.

‘ದೇವೇಗೌಡ ಅವರನ್ನು ಕಾಂಗ್ರೆಸ್– ಜೆಡಿಎಸ್ ನಾಯಕರೇ ಸೋಲಿಸುತ್ತಾರೆ’ ಎಂದು ಬಿಜೆಪಿಯ ಸುರೇಶ್‌ಗೌಡ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲ, ‘ಸುರೇಶ್ ಗೌಡ್ರು ಮೇ 23ರ ವರೆಗೆ ಕಾಯಲಿ. ಅಂದು ಎಲ್ಲರ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ. ತುಮಕೂರಿನಲ್ಲಿ ಬಿಜೆಪಿಯವರು ಜೆಡಿಎಸ್ ಅಭ್ಯರ್ಥಿಗೇ ಮತ ಹಾಕಿದ್ದಾರೆ’ ಎಂದು ಅವರು ಹೇಳಿದರು.

‘ಆಪರೇಷನ್ ಕಮಲ’ ಆಮಿಷದ ಆಡಿಯೊ ಕುರಿತ ತನಿಖೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ತನಿಖೆಗೆ ತಂಡ ರಚಿಸಲು ಸಿದ್ಧತೆ ನಡೆದಿತ್ತು. ಆದರೆ, ಚುನಾವಣೆ ಬಂದ ಕಾರಣ ವಿಳಂಬ ಆಗಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ತಿಳಿಸಿದರು.

‘ಸಮ್ಮಿಶ್ರ ಸರ್ಕಾರ ನಾಲ್ಕು ವರ್ಷ ಪೂರೈಸಲಿದೆ. ನಾವು ಈಗಾಗಲೇ ಜೆಡಿಎಸ್‌ಗೆ ಬೆಂಬಲ ಕೊಟ್ಟಿದ್ದೇವೆ. ಅದರಂತೆ ಮುಂದಿನ ನಾಲ್ಕು ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುತ್ತಾರೆ’ ಎಂದರು.

ಬರಹ ಇಷ್ಟವಾಯಿತೆ?

 • 12

  Happy
 • 3

  Amused
 • 1

  Sad
 • 0

  Frustrated
 • 6

  Angry

Comments:

0 comments

Write the first review for this !