ಮೇಕೆದಾಟು: ಪ್ರತಿಕ್ರಿಯೆಗೆ ಸೂಚನೆ

7
ಪರಿಷ್ಕೃತ ಡಿಪಿಆರ್‌; ‘ಸುಪ್ರೀಂ’ಗೆ ಮಾಹಿತಿ

ಮೇಕೆದಾಟು: ಪ್ರತಿಕ್ರಿಯೆಗೆ ಸೂಚನೆ

Published:
Updated:

ನವದೆಹಲಿ: ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಸರ್ಕಾರವು ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ಕ್ಕೆ ಸಲ್ಲಿಸಿರುವ ಪರಿಷ್ಕೃತ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ತಮಿಳುನಾಡು, ಕೇರಳ ಮತ್ತು ಪುದುಚೇರಿ ಸರ್ಕಾರಗಳಿಗೆ ಸೂಚಿಸಿದೆ.

ಯೋಜನೆಯನ್ನು ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ವಿಶೇಷ ಮೇಲ್ಮನವಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್‌ ನೇತೃತ್ವದ ಪೀಠ, ಕಾವೇರಿ ಕಣಿವೆಯ ಇತರ ರಾಜ್ಯಗಳ ಪ್ರತಿಕ್ರಿಯೆಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿತು.

ಮೇಕೆದಾಟು ಬಳಿ ಕಾವೇರಿ ನದಿಯ 67.16 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಉದ್ದೇಶದಿಂದ ಸಮಾನಾಂತರ ಜಲಾಶಯ ನಿರ್ಮಿಸಲಾಗುವುದು. ಯೋಜನೆ ಅಡಿ 400 ಮೆಗಾವಾಟ್‌ ವಿದ್ಯುತ್‌ ಉತ್ಪಾದಿಸಲಾಗುವುದು ಹಾಗೂ ಬೆಂಗಳೂರು, ರಾಮನಗರಗಳ ಜನತೆಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ರಾಜ್ಯ ಸರ್ಕಾರ ನ್ಯಾಯಪೀಠಕ್ಕೆ ಮಾಹಿತಿ ನೀಡಿತು

ಕಾವೇರಿ ನದಿ ನೀರನ್ನು ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್‌ ಕಳೆದ ವರ್ಷ ತೀರ್ಪು ನೀಡಿದ ನಂತರ ಮೇಕೆದಾಟು ಯೋಜನೆ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ಡಿಪಿಆರ್‌ಗೆ ಸಮ್ಮತಿಸಿದ್ದ ಸಿಡಬ್ಲ್ಯೂಸಿ, ಪರಿಷ್ಕೃತ ಡಿಪಿಆರ್‌ ಸಲ್ಲಿಸುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ತಮಿಳುನಾಡು ಮೇಲ್ಮನವಿ ಸಲ್ಲಿಸಿದೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !