ಕಾರು ಉರುಳಿ ಬಿದ್ದು ವ್ಯಕ್ತಿ ಸಾವು

7

ಕಾರು ಉರುಳಿ ಬಿದ್ದು ವ್ಯಕ್ತಿ ಸಾವು

Published:
Updated:

ಧಾರವಾಡ: ತಾಲ್ಲೂಕಿನ ಪ್ರಭುನಗರ-ಹೊನ್ನಾಪೂರ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ಕಾರು ಉರುಳಿ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ.

ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದ ಗುರು ಯಲಿಗೌಡರ (31) ಮೃತಪಟ್ಟ ವ್ಯಕ್ತಿ. ಗೋವಾದಿಂದ ಧಾರವಾಡ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು, ಪ್ರಭುನಗರ-ಹೊನ್ನಾಪೂರ ಗ್ರಾಮದ ಬಳಿ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಉರುಳಿ ಬಿದ್ದ ಕಾರಣ ಗುರು ಯಲಿಗೌಡರ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯೆದಲ್ಲಿ ಅವರು ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !