ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ

7

ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ

Published:
Updated:

ಬೆಂಗಳೂರು: ಮೂರೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಮಾರತ್‌ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಚಂದ್ರಬಾಬು (52) ಬಂಧಿತ. ಈತ ವೆಲ್ಡಿಂಗ್‌ ಕೆಲಸ ಮಾಡಿಕೊಂಡು ದೇವರ ಬೀಸನಹಳ್ಳಿಯ ಶೆಡ್‌ನಲ್ಲಿ ನೆಲೆಸಿದ್ದ. ಮಗುವಿನ ಪಾಲಕರು ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿಯು ಅವರ ಮನೆಯ ಪಕ್ಕದಲ್ಲಿ ವಾಸಿಸುತ್ತಿದ್ದ. ಸೋಮವಾರ ಮಗುವಿನ ಪಾಲಕರು ಮಗುವನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗಿದ್ದರು.

ಆಟವಾಡುತ್ತಿದ್ದ ಮಗುವನ್ನು ಆರೋಪಿ ಚಾಕೊಲೇಟ್‌ ನೀಡುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ನಂತರ ಆ ಮಗುವನ್ನು ಅವರ ಮನೆಯ ಬಳಿಯೇ ಬಿಟ್ಟು ಹೋಗಿದ್ದ. ಬಾಲಕಿ ಅಳುತ್ತ ನಡೆದ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ. ಸಾರ್ವಜನಿಕರೇ ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅತ್ಯಾಚಾರ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ಆರೋಪಿ ಪತ್ನಿ ಮತ್ತು  ಮೂವರು ಮಕ್ಕಳು ತಮಿಳುನಾಡಿನಲ್ಲಿಯೇ ಇದ್ದಾರೆ. ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !