ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತಿಗೋಡು ಆನೆ ಶಿಬಿರ: ರಸ್ತೆ ತಡೆ ನಿರ್ಮಿಸಲು ಹೈಕೋರ್ಟ್‌ ಆದೇಶ

Last Updated 7 ಮಾರ್ಚ್ 2019, 19:21 IST
ಅಕ್ಷರ ಗಾತ್ರ

ಬೆಂಗಳೂರು: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಮತ್ತಿಗೋಡು ಆನೆ ಶಿಬಿರದ ಬಳಿ ಹಾದುಹೋಗುವ ರಾಜ್ಯ ಹೆದ್ದಾರಿ ಸಂಖ್ಯೆ-90ರ (ಮೈಸೂರು-ವಿರಾಜಪೇಟೆ ರಸ್ತೆ) 11 ಕಿ.ಮೀ ಉದ್ದದ ರಸ್ತೆಯಲ್ಲಿ ಪ್ರತಿ 500 ಮೀಟರ್‌ಗೆ ಒಂದು ರಸ್ತೆ ತಡೆ ನಿರ್ಮಿಸಿ’ ಎಂದು ಹೈಕೋರ್ಟ್, ರಾಜ್ಯ ಲೋಕೋಪಯೋಗಿ ಇಲಾಖೆಗೆ ಆದೇಶಿಸಿದೆ.

ಈ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದು, ‘10 ದಿನಗಳಲ್ಲಿ ಈ ರಸ್ತೆ ತಡೆಗಳನ್ನು ನಿರ್ಮಿಸಬೇಕು’ ಎಂದು ನಿರ್ದೇಶಿಸಿದೆ.

‘ಸಂರಕ್ಷಿತ ಅರಣ್ಯ ಪ್ರದೇಶದ 11 ಕಿ.ಮೀ ಮಾರ್ಗದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಬೇಕು’ ಎಂದು ಕೋರಿ ಬೆಂಗಳೂರಿನ ಎಚ್.ಸಿ.ಪ್ರಕಾಶ್ ಮತ್ತು ಎ.ಎಂ.ಮಹೇಶ್ ಸಲ್ಲಿಸಿರುವ ಅರ್ಜಿ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT