ಹಲ್ಲೆ: ಯುವಕನಿಗೆ ಥಳಿತ

7

ಹಲ್ಲೆ: ಯುವಕನಿಗೆ ಥಳಿತ

Published:
Updated:

ಬೆಂಗಳೂರು: ಹೊಸಕೆರೆಹಳ್ಳಿಯ ಕೆರೆಕೋಡಿ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡುತ್ತಿದ್ದ ಯುವಕನನ್ನು ಸಾರ್ವಜನಿಕರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಗಿರಿನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಆ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ.

‘ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರು ಸಾರ್ವಜನಿಕರ ಮೇಲೆ ಎರಗಿದ್ದ ಆರೋಪಿ, ಮಾರಕಾಸ್ತ್ರಗಳಿಂದ ಹೊಡೆದಿದ್ದ. ಅವರ ರಕ್ಷಣೆಗೆ ಬಂದವರ ಮೇಲೂ ಹಲ್ಲೆಗೆ ಯತ್ನಿಸಿದ್ದ. ಗುಂಪು ಸೇರಿದ್ದ ಸ್ಥಳೀಯರು, ಆತನನ್ನು ಹಿಡಿದು ಥಳಿಸಿದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.

‘ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಬಂದು ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು’ ಎಂದರು.

ಗಿರಿನಗರ ಪೊಲೀಸರು, ‘ಸಾರ್ವಜನಿಕರು ಥಳಿಸಿದ್ದರಿಂದಾಗಿಯುವಕ ಗಾಯಗೊಂಡಿದ್ದಾನೆ. ಆತನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಏನಾಯಿತು ಎಂಬುದರ ಬಗ್ಗೆ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆ ಪಡೆಯಬೇಕಿದೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !