ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪಕೆರೆ ಅಭಿವೃದ್ಧಿ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಿ:ಶಾಸಕ ಪ್ರಸಾದ್ ಅಬ್ಬಯ್ಯ

Last Updated 1 ಜೂನ್ 2019, 15:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ಶನಿವಾರ ನಡೆಸಿದರು. ಕಾರವಾರ ರಸ್ತೆಯ ಕೆಂಪಕೆರೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದ ಅವರು, ₹ 5 ಕೋಟಿ ವೆಚ್ಚದಲ್ಲಿ ಸುಂದರ ಪ್ರವಾಸಿ ತಾಣವಾಗಿ ಕೆರೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮಳೆಗಾಲ ಆರಂಭವಾಗುವ ಮೊದಲೇ ಕಾಮಗಾರಿ ಪೂರ್ಣಗೊಳಿಸಿ ಎಂದು ತಾಕೀತು ಮಾಡಿದರು.

ನೇಕಾರ ನಗರ ಬಳಿಯ ವಾಣಿ ಪ್ಲಾಟ್ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕೂಡಲೇ ಅವರಿಗೆ ಟ್ಯಾಂಕರ್ ನೀರು ನೀಡಿ. ಬೋರವೆಲ್ ಕೊರೆಸಲು ಕ್ರಮ ಕೈಗೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಯೋಧ್ಯಾನಗರ ಅಂಬೇಡ್ಕರ್ ಕಾಲೊನಿಯಲ್ಲಿ ಮುಕ್ತಾಯ ಹಂತದಲ್ಲಿರುವ ₹ 1.5 ಕೋಟಿ ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಯನ್ನು ಪರಿಶೀಲಿಸಿದರು. ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಿ, ಭವನದ ಉದ್ಘಾಟನೆಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದರು.

ಶ್ರೀರಾಮ ಕಾಲೊನಿಯ ಎಚ್.ಡಿ-01 ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಲಭ್ಯವಿರುವ ಸೇವೆಗಳ ಕುರಿತು ಪರಿಶೀಲಿಸಿದರು. ಆ ಭಾಗದ ಉದ್ಯಾನ ಹಾಗೂ ಸಮುದಾಯ ಭವನ ಮತ್ತು ಅಂಗನವಾಡಿ ಕೇಂದ್ರಕ್ಕೆ ಸೌಕಲಭ್ಯ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋನಿಯಾ ಗಾಂಧಿ ನಗರದಲ್ಲಿ ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಮಾಡಿದರೂ ಅದರಿಂದ ನೀರು ಪೂರೈಕೆ ಆಗದೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT