ಬಿ.ವಿ. ಶಿರೂರಗೆ ಮೂಜಗಳ ಪ್ರಶಸ್ತಿ ಪ್ರದಾನ

ಮಂಗಳವಾರ, ಜೂನ್ 18, 2019
31 °C

ಬಿ.ವಿ. ಶಿರೂರಗೆ ಮೂಜಗಳ ಪ್ರಶಸ್ತಿ ಪ್ರದಾನ

Published:
Updated:
Prajavani

ಹುಬ್ಬಳ್ಳಿ: ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಡಾ. ಬಿ.ವಿ. ಶಿರೂರ ಅವರು ದೊಡ್ಡ ಸಾಧನೆ ಮಾಡಿದ್ದಾರೆ ಎಂದು ಮೂರು ಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.

ಡಾ. ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ ಅವರ 16ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಡಾ. ಬಿ.ವಿ. ಶಿರೂರ ಅವರಿಗೆ ಡಾ. ಮೂಜಗಂ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಗುರುಗಳು ಸಾಹಿತಿಗಳು, ಕವಿಗಳು ಆಗಿದ್ದರು. ಅವರ ಹೆಸರಿನಲ್ಲಿ ನೀಡಿರುವ ಈ ಪ್ರಶಸ್ತಿಗೆ ಶಿರೂರ ಅತ್ಯಂತ ಯೋಗ್ಯರು ಎಂದರು.

ಶಿರೂರ ಅವರು 50 ಗ್ರಂಥಗಳನ್ನು ರಚನೆ ಮಾಡಿದ್ದಾರೆ. 18 ವಿದ್ಯಾರ್ಥಿಗಳಿಗೆ ಪಿಎಚ್‌.ಡಿ ಹಾಗೂ 11 ವಿದ್ಯಾರ್ಥಿಗಳಿಗೆ ಎಂಫಿಲ್ ಮಾರ್ಗದರ್ಶನ ಮಾಡಿದ್ದಾರೆ. 300 ಸಂಶೋಧನಾ ಲೇಖನ ಬರೆದಿರುವ ಅವರ ಸಾಧನೆ ಅನನ್ಯವಾಗಿದೆ. ಬಸವ  ಕೇಂದ್ರದ ಮೂಲಕ ವಚನ ಶಿಕ್ಷಣ ಹಾಗೂ ಸಂಶೋಧನಾ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಅವರು ಪ್ರಚಾರದ ಹಪಾಹಪಿ ಇಲ್ಲದೆ ಕೆಲಸ ಮಾಡಿದವರು ಎಂಬುದು ಮುಖ್ಯ ಸಂಗತಿ ಎಂದರು.

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ಶರಣ ಸಾಹಿತ್ಯದ ಪ್ರಚಾರದ ಕೆಲಸವನ್ನು ಮೂಜಗಂ ಸ್ವಾಮೀಜಿ ಮಾಡಿದರು. ಎಲ್ಲ ಸಮಾಜದವರು ನಡೆದುಕೊಳ್ಳುವ ಮಠವನ್ನಾಗಿ ಮೂರು ಸಾವಿರ ಮಠವನ್ನು ಬೆಳೆಸಿದರು. ಬಸವ ತತ್ವಗಳನ್ನು ಪ್ರಪಂಚದಾದ್ಯಂತ ಪ್ರಸಾರ ಮಾಡುವ ಕೆಲಸವನ್ನು ಮಾಡಬೇಕು. ಇಂದಿನ ಯುವ ಜನಾಂಗಕ್ಕೆ ಇದರ ಬಗ್ಗೆ ಹೆಚ್ಚಿನ ಅರಿವು ನೀಡಬೇಕು ಎಂದರು.

ಬಸವತತ್ವ ಪಾಲನೆ, ಸಂಘಟನೆ ಹಾಗೂ ಜಾಗೃತಿ ಸಮಾಜದಲ್ಲಿ ಮೂಡಬೇಕು ಎಂದು ಅವರು ಹೇಳಿದರು.

ಬಿ.ವಿ. ಶಿರೂರ ಮಾತನಾಡಿ, ಈ ಪ್ರಶಸ್ತಿಯು ಇನ್ನಷ್ಟು ಕೆಲಸ ಮಾಡಲು ಆನೆ ಬಲ ತಂದು ಕೊಟ್ಟಿದೆ. ಇನ್ನಷ್ಟು ಸಾಹಿತ್ಯ ರಚನೆಗೆ ಪ್ರೇರಣೆಯನ್ನೂ ನೀಡಿದೆ. ಸರ್ಕಾರ ಪ್ರಕಟಿಸಿದ ಸಮಗ್ರ ವಚನ ಸಾಹಿತ್ಯ ಸಂಪುಟಗಳಲ್ಲಿ ಎರಡಕ್ಕೆ ನನ್ನ ಸಂಶೋಧನಾ, ಸಾಹಿತ್ಯ ವಿಷಯಗಳೇ ಪೂರಕವಾಗಿವೆ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದರು.

ಬಸವ ಕೇಂದ್ರದ ಅಧ್ಯಕ್ಷನಾಗಿ ಸಹ ಕೆಲಸ ಮಾಡುತ್ತಿದ್ದೇನೆ. ಶರಣರ ವಿಷಯವನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಾಡಲಾಗುವುದು. ಮೊರಾರ್ಜಿ ನಗರದಲ್ಲಿ ಈ ಕೇಂದ್ರಕ್ಕೆ ಒಂದು ಎಕರೆ ಜಮೀನು ಸಹ ಸಿಕ್ಕಿದೆ. ಅಲ್ಲಿ ಒಟ್ಟು ₹ 18 ಕೋಟಿ ವೆಚ್ಚದ ವಿವಿಧ ಯೋಜನೆಗಳು ಜಾರಿಗೊಳ್ಳಲಿವೆ. ₹ 2.50 ಕೋಟಿ ವೆಚ್ಚದಲ್ಲಿ ಶಾಲೆಯನ್ನು ಆರಂಭಿಸಿ ಬಸವ ತತ್ವವನ್ನು ಮಕ್ಕಳಿಗೆ ಕಲಿಸಲಾಗುತ್ತದೆ ಎಂದರು.

ಹುಬ್ಬಳ್ಳಿಯ ಎರಡೆತ್ತಿನ ಮಠದ ಸಿದ್ಧಲಿಂಗ ಸ್ವಾಮೀಜಿ, ಹುಬ್ಬಳ್ಳಿಯ ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಕೆಎಲ್‌ಇ ಸಂಸ್ಥೆ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !