ನಾರಾಯಣ ಇಂಟ್ರಾ ಖೇಲೋತ್ಸವ ನಾಳೆ

7

ನಾರಾಯಣ ಇಂಟ್ರಾ ಖೇಲೋತ್ಸವ ನಾಳೆ

Published:
Updated:

ಬೆಂಗಳೂರು: ನಾರಾಯಣ ಶಿಕ್ಷಣ ಸಂಸ್ಥೆಗಳ ಅಂತರ ಶಾಲಾ ಕ್ರೀಡೋತ್ಸವ – ‘ನಾರಾಯಣ ಇಂಟ್ರಾ’ದ ಅಂತಿಮ ಸ್ಪರ್ಧೆ ‘ಖೇಲೋತ್ಸವ – 2019’ ಇದೇ 11ರಂದು ಬೆಳಿಗ್ಗೆ ಜಯನಗರ 1ನೇ ಬ್ಲಾಕ್‌ನ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರು ತಿಂಗಳುಗಳಿಂದ ವಿವಿಧ ಹಂತಗಳಲ್ಲಿ ನಡೆದ ಕ್ರೀಡಾಕೂಟದ ವಿಜೇತರು ಅಂದು ನಡೆಯಲಿರುವ ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಶಾಸಕರಾದ ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ ಮತ್ತು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 

ಸುಮಾರು 5 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !