ಕ್ರಿಕೆಟ್, ವಾಲಿಬಾಲ್ ಪಂದ್ಯ:ಯುವಕರ ಕಲರವ

ಮಂಗಳವಾರ, ಜೂನ್ 18, 2019
28 °C
ದಲಿತ ಸಂಘರ್ಷ ಸಮಿತಿಯಿಂದ ಕ್ರೀಡಾಕೂಟ ಆಯೋಜನೆ

ಕ್ರಿಕೆಟ್, ವಾಲಿಬಾಲ್ ಪಂದ್ಯ:ಯುವಕರ ಕಲರವ

Published:
Updated:
Prajavani

ಮಡಿಕೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್‌ ಅವರ 128ನೇ ಜಯಂತಿ ಅಂಗವಾಗಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್, ವಾಲಿಬಾಲ್, ಕಬಡ್ಡಿ ಪಂದ್ಯಗಳು ನಡೆದವು.

ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಂ.ಬಿ. ಗಣೇಶ್ ಟೂರ್ನಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜನಾಂಗ ಬಾಂಧವರು ಒಗ್ಗೂಡಿ ಮುನ್ನಡೆದಾಗ ಮಾತ್ರ ಆಯಾ ಜನಾಂಗದ ಅಭ್ಯುದಯ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲೂ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಬಡವರನ್ನು ಗುರುತಿಸಿ ಅವರ ಅಭಿವೃದ್ಧಿಗೆ ಕೈಜೋಡಿಸುವ ಮೂಲಕ ಸಂಘಟನೆಯನ್ನೂ ಬೆಳೆಸಬೇಕು ಎಂದು ಸಲಹೆ ನೀಡಿದರು.

ಶೈಕ್ಷಣಿಕ ಪ್ರಗತಿಯ ಚಿಂತನೆಯಡಿ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತಿರುವ ದಲಿತ ಸಂಘರ್ಷ ಸಮಿತಿ ಸಾಮಾಜಿಕ ಕಳಕಳಿಯನ್ನು ತೋರುತ್ತಿದ್ದು, ಇದು ಶ್ಲಾಘನೀಯ ಕಾರ್ಯ ಎಂದು ಗಣೇಶ್‌ ಹೇಳಿದರು.

ಉದ್ಯಮಿ ಶರೀನ್ ಮಾತನಾಡಿ, ಸಂಘಟನೆಗಳು ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಉದ್ಯಮಿ ಜಿ. ಕಿರಣ ಕುಮಾರ್ ಮಾತನಾಡಿ, ಪ್ರತಿಯೊಂದು ಸಮುದಾಯದಲ್ಲೂ ಪ್ರತಿಭೆಗಳಿದ್ದು, ಈ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕು ಎಂದರು.

ಮೈಸೂರು, ಕೊಡಗು ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್. ದಿವಾಕರ್, ಗುತ್ತಿದೆದಾರ ಎಚ್.ಬಿ.ವಿಜಯ ಕುಮಾರ್, ಮಡಿಕೇರಿ ತಾಲ್ಲೂಕು ಸಂಚಾಲಕ ಎಂ.ಪಿ. ದೀಪಕ್ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !