ಶುಕ್ರವಾರ, ಫೆಬ್ರವರಿ 26, 2021
32 °C
sucide

ಟಿ.ವಿ ವರದಿಗಾರ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆ.ಆರ್‌. ಪುರದ ದೇವಸಂದ್ರ ನಿವಾಸಿ, ಖಾಸಗಿ ಸುದ್ದಿವಾಹಿನಿಯೊಂದರ ಸ್ಥಳೀಯ ವರದಿಗಾರ ನಯಾಝ್‌ ಖಾನ್‌ (36) ಮಂಗಳವಾರ ತಡರಾತ್ರಿ ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ 12.30ಕ್ಕೆ ಮನೆಗೆ ಬಂದಿದ್ದ ನಯಾಝ್‌, ಮನೆಯ ಹಾಲ್‌ನಲ್ಲಿ ಮಲಗಿದ್ದರು. ಕೊಠಡಿಯಲ್ಲಿ ಮಕ್ಕಳ ಜೊತೆ ಮಲಗಿದ್ದ ಪತ್ನಿ, ಬುಧವಾರ ನಸುಕಿನ 6.30ಕ್ಕೆ ಎದ್ದು ನೋಡಿದಾಗ ಪತಿ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.

ಪೊಲೀಸ್‌ ಕಮಿಷನರ್‌ ಸುನೀಲ್‌ ಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ನಯಾಝ್‌ ಅವರ ಸ್ವಂತ ಊರು ಚಿಂತಾಮಣಿಗೆ ಕೊಂಡೊಯ್ಯಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು