ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22ರಂದು ನೈಟಿಂಗೇಲ್ ಪ್ರಶಸ್ತಿ ಪ್ರದಾನ

Last Updated 11 ಡಿಸೆಂಬರ್ 2018, 19:34 IST
ಅಕ್ಷರ ಗಾತ್ರ

ಬೆಂಗಳೂರು: ಆಂಗ್ಲೊ ಇಂಡಿಯನ್‌ ಯುನಿಟಿ ಸೆಂಟರ್‌ ವತಿಯಿಂದ ರಾಜ್ಯದ ಆಯ್ದ 12 ಜನ ನರ್ಸ್‌ಗಳಿಗೆ ಇದೇ 22ರಂದುರಾಜಭವನದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ‘ಫ್ಲಾರೆನ್ಸ್ ನೈಟಿಂಗೇಲ್’ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾಧಕ ನರ್ಸ್‌ಗಳಿಗೆ ರಾಜ್ಯಪಾಲವಜುಭಾಯಿ ವಾಲಾ ಪ‍್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಆರೋಗ್ಯ ಸಚಿವ ಶಿವಾನಂದ ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಆರು ಜನ ಸ್ಟಾಪ್‌ ನರ್ಸ್‌ಗಳು, ತಲಾ ಇಬ್ಬರು ನರ್ಸಿಂಗ್‌ ಕಾಲೇಜಿನ ಉಪನ್ಯಾಸಕರು ಹಾಗೂ ನರ್ಸಿಂಗ್‌ ಸೂಪರಿಂಟೆಂಡೆಂಟ್‌ಗಳು ಹಾಗೂ ಬಿಎಸ್ಸಿ ನರ್ಸಿಂಗ್‌ನಲ್ಲಿ ಮೊದಲ ರ‍್ಯಾಂಕ್‌ ಗಳಿಸಿದ ವಿದ್ಯಾರ್ಥಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂದು ಫ್ಲಾರೆನ್ಸ್‌ ನೈಟಿಂಗೇಲ್‌ ಪ್ರಶಸ್ತಿ ಪ್ರದಾನ ಸಮಿತಿಯ ಅಧ್ಯಕ್ಷ ಐವಾನ್‌ ನಿಗ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT