ಬುಧವಾರ, ಸೆಪ್ಟೆಂಬರ್ 30, 2020
21 °C

ಕೊಪ್ಪಳ: 98 ಜನರಿಗೆ ಕೋವಿಡ್, ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಕೋವಿಡ್ ದೃಢಪಟ್ಟಿದ್ದ ಯಲಬುರ್ಗಾ ತಾಲ್ಲೂಕಿನ ಆಡೂರು ಗ್ರಾಮದ 62 ವರ್ಷದ ಮಹಿಳೆ ಹಾಗೂ ಹೊಸಪೇಟೆ ತಾಲ್ಲೂಕಿನ 62 ವರ್ಷದ ಪುರುಷರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃಪಟ್ಟಿದ್ದಾರೆ.

ಕೊಪ್ಪಳ ತಾಲ್ಲೂಕಿನಲ್ಲಿ 27, ಗಂಗಾವತಿ 53, ಕುಷ್ಟಗಿ 17, ಯಲಬುರ್ಗಾ 1 ಸೇರಿದಂತೆ  ಶುಕ್ರವಾರ ಒಟ್ಟು 98 ಪ್ರಕರಣಗಳು ದಾಖಲಾಗಿವೆ.

68 ಜನರು ಗುಣಮುಖರಾಗಿದ್ದು, ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 757 ಜನ ಗುಣಮುಖರಾಗಿದ್ದಾರೆ. 175 ಜನರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ. 

ಈವರೆಗೆ 24,960 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿದ್ದು, ಇದರಲ್ಲಿ 24,002 ಜನರ ವರದಿ ಬಂದಿದೆ. ಇನ್ನುಳಿದ 958 ಜನರ ವರದಿ ಬರಬೇಕಾಗಿದೆ.

ಕೋವಿಡ್ ಪರೀಕ್ಷೆಯನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಹೆಚ್ಚು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್‌.ವಿಕಾಸ್‌ ಕಿಶೋರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು