ಈಶಾನ್ಯ ರಾಜ್ಯ ವಿದ್ಯಾರ್ಥಿನಿಯರ ಹಾಸ್ಟೆಲ್‌ ಉದ್ಘಾಟನೆ ನಾಳೆ

ಮಂಗಳವಾರ, ಮಾರ್ಚ್ 19, 2019
28 °C

ಈಶಾನ್ಯ ರಾಜ್ಯ ವಿದ್ಯಾರ್ಥಿನಿಯರ ಹಾಸ್ಟೆಲ್‌ ಉದ್ಘಾಟನೆ ನಾಳೆ

Published:
Updated:
Prajavani

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಿರ್ಮಿಸಿರುವ ಈಶಾನ್ಯ ರಾಜ್ಯಗಳ ವಿದ್ಯಾರ್ಥಿನಿಯರ ಹಾಸ್ಟೆಲ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಇದೇ 6 ರಂದು (ಬುಧವಾರ) ಉದ್ಘಾಟಿಸಲಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ಮತ್ತು  ಅಧೀನ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಈಶಾನ್ಯ ರಾಜ್ಯಗಳ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ₹14 ಕೋಟಿ ವೆಚ್ಚದಲ್ಲಿ ಹಾಸ್ಟೆಲ್‌ ನಿರ್ಮಿಸಲಾಗಿದೆ ಎಂದು ಕುಲಪತಿ ಕೆ.ಆರ್‌.ವೇಣುಗೋಪಾಲ್ ‘ಪ್ರಜಾವಾಣಿ’ಗೆ ತಿಳಿಸಿದರು.

ಕೇಂದ್ರ ಸರ್ಕಾರದ ಈಶಾನ್ಯ ರಾಜ್ಯಗಳ ಪರಿಷತ್ತು ಈ ಕಟ್ಟಡಕ್ಕೆ ಅನುದಾನ ನೀಡಿದೆ. ಬುಧವಾರ ಕಲಬುರ್ಗಿಗೆ ಬರಲಿರುವ ಪ್ರಧಾನಿಯವರು ವಿಡಿಯೊ ಕಾನ್ಫೆರೆನ್ಸಿಂಗ್‌ ಮೂಲಕ ಬೆಳಿಗ್ಗೆ 11ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಈ ಯೋಜನೆಯನ್ನು 2016 ರಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. 18 ತಿಂಗಳಲ್ಲಿ ಪೂರ್ಣಗೊಳ್ಳಬೇಕಿತ್ತು. ಕಟ್ಟಡ ನಿರ್ಮಾಣ ಕಾರ್ಯ ಕುಟುಂತ್ತಾ ಸಾಗಿತ್ತು. ಬಳಿಕ ನಿರ್ಮಾಣಕ್ಕೆ ಚುರುಕು ನೀಡಲಾಯಿತು. ಈಶಾನ್ಯ ರಾಜ್ಯಗಳ ಮಹಿಳಾ ವಿದ್ಯಾರ್ಥಿಗಳ ವಸತಿ ನಿಲಯದ ಕಟ್ಟಡವು ಭಾರತದಲ್ಲೇ ಪ್ರಥಮವಾಗಿದೆ ಎಂದು ಅವರು ಹೇಳಿದರು.

ಹಾಸ್ಟಲ್‌ ಕಟ್ಟಡದಲ್ಲಿ ಮೂರು ಮಹಡಿಗಳಿದ್ದು, 6809 ಚ.ಮೀ ವಿಸ್ತೀರ್ಣ ಹೊಂದಿದೆ. 100 ಕೊಠಡಿಗಳಲ್ಲಿ 300 ವಿದ್ಯಾರ್ಥಿನಿಯರು ವಾಸಿಸಬಹುದು. ಕೊಠಡಿಗಳಲ್ಲಿ ವಾರ್ಡ್‌ರೋಬ್‌, ವೈಫೈ, ಓದುವ ಕೊಠಡಿ, ಗ್ರಂಥಾಲಯ ಮತ್ತಿತರ ಸೌಲಭ್ಯಗಳಿವೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !