ಸೋಮವಾರ, ಏಪ್ರಿಲ್ 12, 2021
24 °C

‘ರೋಗಿಗಳಿಗೆ ಉತ್ತಮ ಚಿಕಿತ್ಸೆ ಮುಖ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮಪಡಿಸಿಕೊಳ್ಳುವುದು ಅತಿ ಮುಖ್ಯ’ ಎಂದು ಕರ್ನಾಟಕ ನರ್ಸಿಂಗ್‌ ಕೌನ್ಸಿಲ್‌ನ ಉಷಾ ಭಂಡಾರಿ ತಿಳಿಸಿದರು.

ತುರ್ತು ಚಿಕಿತ್ಸಾ ನೀತಿಗಳನ್ನು ಉತ್ತಮಪಡಿಸಿಕೊಳ್ಳುವ ಕುರಿತು ಯಲಹಂಕದ ಆದಿತ್ಯ ನರ್ಸಿಂಗ್‌ ಕಾಲೇಜಿನಲ್ಲಿ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ನೀಡುವ ಚಿಕಿತ್ಸೆ, ಔಷಧಿ ಹಾಗೂ ಶುಶ್ರೂಷೆ ಪರಿಣಾಮಕಾರಿಯಾಗಿದ್ದರೆ ಆದಷ್ಟು ಶೀಘ್ರ ರೋಗಿಗಳು ಗುಣಮುಖರಾಗಲು ಸಾಧ್ಯ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಶೋಭಾ ರಾಮಕೃಷ್ಣ, ‘ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ’ ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು