ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿನಿ

7

ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿನಿ

Published:
Updated:

ಬೆಂಗಳೂರು:‌ ‘ನನ್ನ ಜೀವಕ್ಕೆ ಬೆದರಿಕೆ ಇದ್ದು, ಸೂಕ್ತ ರಕ್ಷಣೆ ಒದಗಿಸಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿ ನಗರದ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಕುರಿತಂತೆ ದೊಡ್ಡಬೊಮ್ಮಸಂದ್ರದ ಎಸ್.ರಾಜಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ಬೆಥೆಲ್‌ ಹೋಲಿ ಫೈರ್‌ ಮಿನಿಸ್ಟ್ರೀಸ್‌ ಬೆಥೆಲ್‌ ಮೆಡಿಕಲ್ ಸರ್ವೀಸಸ್‌ ಸ್ಥಾಪಕ ಹಾಗೂ ಅಧ್ಯಕ್ಷ ಡಾ. ಡಿ.ಸನ್ನಿ ಸೇರಿದಂತೆ 8 ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ವಿಚಾರಣೆ ವೇಳೆ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್‌ ವಾದ ಮಂಡಿಸಿ, ‘ಅರ್ಜಿದಾರ ವಿದ್ಯಾರ್ಥಿನಿ ಪಾನ್‌ ಏಷಿಯಾ ನರ್ಸಿಂಗ್‌ ಕಾಲೇಜಿನಲ್ಲಿ 2017ರಲ್ಲೇ ಬಿ.ಎಸ್ಸಿ ನರ್ಸಿಂಗ್‌ ಪದವಿ ಮುಗಿಸಿದ್ದಾರೆ.

'ಆದರೆ, ಸಂಸ್ಥೆಯ ಮುಖ್ಯಸ್ಥರೂ ಆದ ಸನ್ನಿ ವಿದ್ಯಾರ್ಥಿನಿಗೆ ಲೈಂಗಿಕ, ದೈಹಿಕ ಮತ್ತು ಮಾನಸಿಕ ಕಿರಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

 

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !