ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗರ ಸಂಘದ ಆಡಳಿತಾಧಿಕಾರಿ ಬದಲಿಸಿ: ಎಂ.ಎ.ಆನಂದ್ ಒತ್ತಾಯ

Last Updated 23 ಮಾರ್ಚ್ 2019, 19:40 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಒಕ್ಕಲಿಗರ ಸಂಘಕ್ಕೆ ಆಡಳಿತಾಧಿಕಾರಿಯಾಗಿಸರ್ಕಾರ ನೇಮಿಸಿರುವ ಅಶೋಕ್‌ ಆನಂದ ಅವರನ್ನು ಬದಲಿಸಿ ಸಂಘದ ಆಜೀವ ಸದಸ್ಯರಿಂದ ಆಯ್ಕೆಯಾದ ನಿರ್ದೇಶಕರಿಗೆ ಅಧಿಕಾರ ಕೊಡಬೇಕು’ ಎಂದು ಸಂಘದ ಮಾಜಿ ಕಾರ್ಯಾಧ್ಯಕ್ಷ ಎಂ.ಎ.ಆನಂದ್ ಒತ್ತಾಯಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದ ಯಾವುದೇ ಅನುಭವವಿಲ್ಲದ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿರುವುದು ಸರಿಯಿಲ್ಲ. ಅವರು ಕೆಲಸದ ಮೇಲೆ ಗಮನಹರಿಸದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ’ ಎಂದು ದೂರಿದರು.

‘ಪ್ರತಿ ವರ್ಷ ಸಹಕಾರ ಸಚಿವರು ಸರ್ವ ಸದಸ್ಯರ ಸಭೆ ಕರೆದು, ಲೆಕ್ಕ ಪರಿಶೋಧನೆ ಮಾಡಿಸಬೇಕಿತ್ತು. ಅದನ್ನು ಮಾಡದೇ, ಆಡಳಿತಾಧಿಕಾರಿಯನ್ನು ನೇಮಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಾಳಿಗೆ ತೂರಿದ್ದಾರೆ. ಈ ಲೋಪಕ್ಕೆ ಕಾರಣರಾದ ಸಚಿವ ಬಂಡೆಪ್ಪ ಕಾಶೆಂಪೂರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

ಅಶೋಕ್‌ ಆನಂದ್‌ ಅವರು ನೇಮಕವಾದ ನಂತರ ಸಂಘಕ್ಕೆ ಬರುತ್ತಿದ್ದ ಆದಾಯ ಕಡಿಮೆ
ಆಗಿದೆ. ಈ ಹಿಂದೆ ಪ್ರತಿ ದಿನ ₹ 10 ಲಕ್ಷದಿಂದ ₹ 15 ಲಕ್ಷ ಸಂಗ್ರಹವಾಗುತ್ತಿದ್ದ ವರಮಾನ ಬರುತ್ತಿತ್ತು. ಅದೀಗ ₹ 2 ಲಕ್ಷದಿಂದ ₹ 3 ಲಕ್ಷಕ್ಕೆ ಇಳಿದಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT