ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಪರೇಷನ್ ಕಮಲ’ ತಂಟೆ ಬೇಡ: ಶಾ ಕಟ್ಟಪ್ಪಣೆ

Last Updated 22 ಫೆಬ್ರುವರಿ 2019, 20:27 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯುವವರೆಗೆ ‘ಆಪರೇಷನ್‌ ಕಮಲ’ ತಂಟೆಗೆ ಹೋಗಬಾರದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯ ನಾಯಕರಿಗೆ ಕಟ್ಟಪ್ಪಣೆ ವಿಧಿಸಿದ್ದಾರೆ.

ದೇವನಹಳ್ಳಿಯಲ್ಲಿ ಗುರುವಾರ ಸಂಜೆ ಶಕ್ತಿ ಕೇಂದ್ರ ಪ್ರಮುಖರ ಸಭೆ ನಡೆಸಿದ ಬಳಿಕ ಸುಮಾರು ಮೂರು ತಾಸು ರಾಜ್ಯ ಪ್ರಮುಖರ ಜತೆಗೆ ಸಮಾಲೋಚನೆ ನಡೆಸಿದರು. ಲೋಕಸಭಾ ಚುನಾವಣೆಯ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೆಲವು ಪ್ರಮುಖರ ಜತೆ ಪ್ರತ್ಯೇಕವಾಗಿ ಮಾತನಾಡಿ ಮಾಹಿತಿ ಪಡೆದರು. ‘ಆಪರೇಷನ್‌ ಕಮಲದ ವಿಚಾರದಲ್ಲಿ ರಾಜ್ಯ ಘಟಕ ಸ್ವಲ್ಪ ಆತುರ ತೋರಿತು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗಳ ನಾಯಕರೇ ಪರಸ್ಪರ ಕಚ್ಚಾಡಿಕೊಂಡು ಸರ್ಕಾರ ಪತನಗೊಳಿಸುತ್ತಿದ್ದರು. ಅಲ್ಲಿಯವರೆಗೆ ಸಾವಧಾನದಿಂದ ಕಾಯಬೇಕಿತ್ತು. ಬಜೆಟ್‌ ಮಂಡನೆಯ ಹಿಂದಿನ ದಿನ ದೇವದುರ್ಗಕ್ಕೆ ಹೋಗುವ ಅವಶ್ಯಕತೆ ಏನಿತ್ತು. ಕೈಗೆ ಬರಲಿದ್ದ ತುತ್ತನ್ನು ಆಪರೇಷನ್‌ ಆಡಿಯೊದ ಮೂಲಕ ಕಳೆದುಕೊಂಡಿದ್ದೀರಿ’ ಎಂದೂ ಅಸಮಾಧಾನ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.

ರಾಜ್ಯದಲ್ಲಿ ಕನಿಷ್ಠ 22 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಶುಕ್ರವಾರದಿಂದಲೇ ಈ ಗುರಿಯತ್ತ ಕಾರ್ಯೋನ್ಮುಖರಾಗಬೇಕು. ರಾಜ್ಯ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಮಾಡಬೇಕು ಎಂದು ರಾಜ್ಯ ನಾಯಕರಿಗೆ ತಾಕೀತು ಮಾಡಿದರು.

ಹಾಲಿ ಸಂಸದರಿಗೆ ಟಿಕೆಟ್‌ ಅನುಮಾನ?: ಕಳೆದ ಚುನಾವಣೆಯಲ್ಲಿ 17 ಕ್ಷೇತ್ರಗಳಲ್ಲಿ ಪಕ್ಷ ಜಯಭೇರಿ ಬಾರಿಸಿತ್ತು. ಈ ಪೈಕಿ ಆರು ಸಂಸದರ ಸಾಧನೆ ಉತ್ತಮವಾಗಿಲ್ಲ. ಅಂತಹವರ ಬದಲು ಬೇರೆಯವರನ್ನು ಕಣಕ್ಕೆ ಇಳಿಸುವುದು ಒಳಿತು ಎಂಬ ಚರ್ಚೆ ಸಭೆಯಲ್ಲಿ ನಡೆಯಿತು ಎನ್ನಲಾಗಿದೆ.

‘ಈ ಬಗ್ಗೆ ಈಗಲೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ನಿಮ್ಮ ಅಭಿ‍ಪ್ರಾಯ ಕಳುಹಿಸಿ. ಆಂತರಿಕ ಸಮೀಕ್ಷಾ ವರದಿಗಳನ್ನು ಪರಿಶೀಲಿಸಿ ಸಂಸದೀಯ ಮಂಡಳಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ಅಮಿತ್‌ ಶಾ ಹೇಳಿದರು ಎಂದು ಮೂಲಗಳು ಹೇಳಿವೆ.

ಉಡುಪಿ–ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣದತ್ತ ಆಸಕ್ತಿ ಹೊಂದಿದ್ದರು. ಅವರು ಸ್ಪರ್ಧಿಸಲು ಒಪ್ಪದೇ ಇದ್ದರೆ, ಅವರ ಬದಲು ಜಯಪ್ರಕಾಶ್ ಹೆಗ್ಡೆ ಅವರನ್ನು ಕಣಕ್ಕೆ ಇಳಿಸುವುದು ಸೂಕ್ತ ಎಂಬ ಸಲಹೆ ವ್ಯಕ್ತವಾಯಿತು.

ಬೆಳಗಾವಿ ಸಂಸದ ಸುರೇಶ ಅಂಗಡಿ ಅವರನ್ನು ಮತ್ತೆ ಅಭ್ಯರ್ಥಿಯಾಗಿಸುವ ಬಗ್ಗೆ ಸ್ಥಳೀಯರಲ್ಲಿ ಸಾಕಷ್ಟು ವಿರೋಧವಿದೆ. ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಕ್ಷೇತ್ರಗಳಲ್ಲಿ ಕೂಡ ಅಭ್ಯರ್ಥಿ ಬದಲಾವಣೆ ಮಾಡಬೇಕು ಎಂಬ ಬೇಡಿಕೆ ಸ್ಥಳೀಯ ಮಟ್ಟದಲ್ಲಿದೆ. ಈ ಬಗ್ಗೆಯೂ ವರಿಷ್ಠರು ಗಮನ ಹರಿಸಬೇಕು ಎಂಬ ಅಭಿಪ್ರಾಯ ಮೂಡಿಬಂತು ಎಂದು ಮೂಲಗಳು ಹೇಳಿವೆ.

ಶಾಸಕ ಬಿ. ಶ್ರೀರಾಮುಲು ಸೋದರಿ ಜೆ. ಶಾಂತಾ ಅವರನ್ನು ಮತ್ತೆ ಬಳ್ಳಾರಿಯಲ್ಲಿ ಕಣಕ್ಕೆ ಇಳಿಸುವುದು ಬೇಡ. ಅವರ ಬದಲು ಎನ್.ವೈ. ಹನುಮಂತಪ್ಪ ಅಥವಾ ಬಿಜೆಪಿ ಬಗ್ಗೆ ಒಲವಿರುವ ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಸೋದರ ವೆಂಕಟೇಶ ಪ್ರಸಾದ್ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆಯಿತು ಎಂದು ಗೊತ್ತಾಗಿದೆ.

ಚಿಕ್ಕೋಡಿ ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯಲ್ಲಿ ಸೋತಿದ್ದ ರಮೇಶ ಕತ್ತಿ (ಶಾಸಕ ಉಮೇಶ ಕತ್ತಿ ತಮ್ಮ), ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರು ಸ್ಪರ್ಧೆಗೆ ತೀವ್ರ ಆಕಾಂಕ್ಷೆ ಹೊಂದಿದ್ದಾರೆ. ಕಾಂಗ್ರೆಸ್‌ ಭಿನ್ನಮತೀಯರ ಗುಂಪಿನ ನೇತೃತ್ವ ವಹಿಸಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಪಕ್ಷಕ್ಕೆ ಬರುವುದಾದರೆ ಅವರಿಗೆ ಈ ಕ್ಷೇತ್ರದಲ್ಲಿ ಟಿಕೆಟ್ ಕೊಡುವ ಬಗ್ಗೆಯೂ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.

ಮಾರ್ಚ್‌ 9ಕ್ಕೆ ಹಾವೇರಿಗೆ ರಾಹುಲ್‌

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಮಾರ್ಚ್‌ 9ರಂದು ಹಾವೇರಿಯಲ್ಲಿ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಚುನಾವಣಾ ಸಿದ್ಧತೆಗಾಗಿ ‍ಪ್ರತಿಯೊಂದು ಜಿಲ್ಲೆಯಲ್ಲಿಯೂ ‘ಜನಪರಿವರ್ತನಾ ಯಾತ್ರೆ’ ನಡೆಸಲು ಪಕ್ಷ ನಿರ್ಧರಿಸಿದ್ದು, ಇದೇ 23ರಂದು ರಾಯಚೂರಿನಲ್ಲಿ ಯಾತ್ರೆ ಆರಂಭವಾಗಲಿದೆ.

ಬಿಜೆಪಿ ರಾಜ್ಯ ಘಟಕದ ನಾಯಕರು ‘ಮೋದಿ ವಿಜಯ ಸಂಕಲ್ಪ ಯಾತ್ರೆ’ ಹೆಸರಿನಲ್ಲಿ ಶುಕ್ರವಾರದಿಂದ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ‘ಕೈ’ ಪಾಳಯ ‘ಪರಿವರ್ತನಾ ಯಾತ್ರೆ’ಯ ಮೊರೆ ಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT