ಹುಬ್ಬಳ್ಳಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ

ಭಾನುವಾರ, ಏಪ್ರಿಲ್ 21, 2019
25 °C
ಪರಸ್ಪರ ಸಮನ್ವಯ ಹಾಗೂ ಸಹಕಾರದಿಂದ ಕೆಲಸ ಮಾಡಿ: ಅಣ್ಣಿಗೇರಿ

ಹುಬ್ಬಳ್ಳಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ

Published:
Updated:
Prajavani

ಹುಬ್ಬಳ್ಳಿ: ಪೊಲೀಸ್ ಸಿಬ್ಬಂದಿ ಪರಸ್ಪರ ಸಮನ್ವಯ ಹಾಗೂ ಸಹಕಾರದಿಂದ ಕೆಲಸ ಮಾಡಿದಾಗ ಜನರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯ ಎಂದು ನಿವೃತ್ತ ಎಸ್ಐ ಅಣ್ಣಿಗೇರಿ ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಸ್ತಿನ ಇಲಾಖೆ ಇದಾಗಿರುವುದರಿಂದ ಎಂತಹ ಸಂದರ್ಭ ಬಂದರೂ ಶಿಸ್ತು ಪಾಲಿಸಬೇಕು. ಆರೋಗ್ಯದ ಬಗ್ಗೆ ಹೆಚ್ಷಿನ ಕಾಳಜಿ ವಹಿಸಬೇಕು ಎಂದರು.

ನಿವೃತ್ತ ಪೊಲೀಸ್ ಸಿಬ್ಬಂದಿಗೂ ಸರ್ಕಾರ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಿದೆ. ಈಗಾಗಲೇ 47 ಮಂದಿ ಇದರ ಪ್ರಯೋಜನಾ ಪಡೆದಿದ್ದು, ಉಳಿದವರೂ ಈ ಯೋಜನೆಯ ಲಾಭ ಪಡೆಯಬೇಕು. ಕಳೆದ ವರ್ಷ 12 ಲಕ್ಷ ರೂಪಾಯಿಯನ್ನು ಸಿಬ್ಬಂದಿ ಕಲ್ಯಾಣ ನಿಧಿಗೆ ಸಂಗ್ರಹಿಸಲಾಗಿದೆ. ಆರೋಗ್ಯ, ಶಿಕ್ಷಣ ಮುಂತಾದ ಕಾರಣಗಳಿಗೆ ಅದನ್ನು ವಿನಿಯೋಗಿಸಲಾಗುತ್ತಿದೆ ಎಂದು ಕಮಿಷನರ್ ಎಂ.ಎನ್. ನಾಗರಾಜ ಹೇಳಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ನಾಗೇಶ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಡಾ. ಶಿವಕುಮಾರ ಇದ್ದರು. ಪೊಲೀಸ್‌ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿ ಎಲ್ಲರ ಗಮನ ಸೆಳೆದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !