ಶುಕ್ರವಾರ, ನವೆಂಬರ್ 22, 2019
26 °C

ಪೊಲೀಸ್ ಅಧಿಕಾರಿ ಆತ್ಮಹತ್ಯೆ

Published:
Updated:

ಬೆಂಗಳೂರು: ಅನಾರೋಗ್ಯದಿಂದ ನೊಂದಿದ್ದ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ಮರಣಪತ್ರ ಬರೆದಿಟ್ಟುವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿರುವ ಎ.ಎನ್. ಅಪ್ಪಚ್ಚು (53) ಆತ್ಮಹತ್ಯೆ ಮಾಡಿಕೊಂಡವರು.

‘ಚರ್ಮರೋಗ ಬಳಲುತ್ತಿದ್ದು, ಚಿಕಿತ್ಸೆ ಪಡೆಯಲು ಸಮಯ ಆಗುತ್ತಿಲ್ಲ. ಹೀಗಾಗಿ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಅಪ್ಪಚ್ಚು ಅವರು ಬರೆದಿಟ್ಟಿರುವ ಮರಣಪತ್ರ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದರು.

ಅಪ್ಪಚ್ಚು ಅವರು ಆಡುಗೋಡಿ ಪೊಲೀಸ್ ವಸತಿಗೃಹದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ನೆಲೆಸಿದ್ದರು. ಮೂರು ದಿನಗಳಿಂದ ಅವರು ಮನೆಗೆ ಹೋಗಿರಲಿಲ್ಲ.

ಪ್ರತಿಕ್ರಿಯಿಸಿ (+)