ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೈಲು

Last Updated 29 ಜನವರಿ 2019, 19:59 IST
ಅಕ್ಷರ ಗಾತ್ರ

ಬೆಂಗಳೂರು: ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿ ಶ್ರೀನಿವಾಸ್ ಅಲಿಯಾಸ್ ಸೀನ (26) ಎಂಬಾತನಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಗರದ 55ನೇ ಸಿಸಿಎಚ್‌ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ2014ರಲ್ಲಿ ನಡೆದಿದ್ದ ಪ್ರಕರಣದ ವಿಚಾರಣೆಯನ್ನುನ್ಯಾಯಾಧೀಶೆ ಶಾರದಾ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ರಂಗಯ್ಯ ವಾದಿ ಸಿದ್ದರು. ಸುಂಕದಕಟ್ಟೆಯ ಭೈರವೇಶ್ವರನಗರ ನಿವಾಸಿಯಾದ ಶ್ರೀನಿವಾಸ್, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.

ಆ ಸಂಬಂಧ ಬಾಲಕಿಯ ತಾಯಿ, ಪೊಲೀಸರಿಗೆ ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಇನ್‌ಸ್ಪೆಕ್ಟರ್ ಬಾಳೇಗೌಡ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT