ಸೋಮವಾರ, ನವೆಂಬರ್ 18, 2019
22 °C

ಚುನಾವಣಾ ತಕರಾರು: ಪ್ರಜ್ವಲ್‌ ಅರ್ಜಿ

Published:
Updated:

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ತಮ್ಮ ವಿರುದ್ಧದ ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಪ್ರತ್ಯಾರೋಪ ಅರ್ಜಿ ಸಲ್ಲಿಸಿದ್ದಾರೆ.

ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಸಲ್ಲಿಸಿರುವ ಈ ಅರ್ಜಿಯಲ್ಲಿ ಪ್ರತಿವಾದಿ ಪ್ರಜ್ವಲ್‌ ರೇವಣ್ಣ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು ಹಾಜರಾಗಿ ಈ ಅರ್ಜಿ ಸಲ್ಲಿಸಿದರು. ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಕಲಬುರಗಿಯಿಂದ ವಿಡಿಯೊ ಕಾನ್ಫರೆನ್ಸ್‌ ಮೂಲಕ ಈ ಅರ್ಜಿ ವಿಚಾರಣೆ ನಡೆಸಿತು.

‘ಒಂದು ವೇಳೆ ಈ ಪ್ರಕರಣದಲ್ಲಿ ನ್ಯಾಯಾಲಯ ಹಾಲಿ ಆಯ್ಕೆಯನ್ನು ಅನೂರ್ಜಿತಗೊಳಿಸಿದರೆ, ಅತಿ ಹೆಚ್ಚು ಮತ ಪಡೆದ ಎರಡನೇ ಅಭ್ಯರ್ಥಿಯಾದ ನನ್ನನ್ನೇ ಆಯ್ಕೆಯಾದ ಅಭ್ಯರ್ಥಿ ಎಂದು ಘೋಷಿಸಬೇಕು ಎಂಬ ಮಂಜು ಅವರ ಕೋರಿಕೆ ಸಮಂಜಸವಲ್ಲ’ ಎಂದು ಪ್ರಜ್ವಲ್‌ ಪ್ರತ್ಯಾರೋಪ ಅರ್ಜಿಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)