ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವಿಮಾನ ನಿಲ್ದಾಣಕ್ಕೆ ಖಾಸಗಿ ಸಹಭಾಗಿತ್ವ

6 ನಿಲ್ದಾಣಗಳ ಪಿಪಿಪಿ ಮಾದರಿ: ಕೇಂದ್ರ ಸಂಪುಟ ನಿರ್ಧಾರ
Last Updated 9 ನವೆಂಬರ್ 2018, 20:36 IST
ಅಕ್ಷರ ಗಾತ್ರ

ನವದೆಹಲಿ: ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ಖಾಸಗಿ ಸಹಭಾಗಿತ್ವ ಪಡೆದುಕೊಳ್ಳಲು ಕೇಂದ್ರ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ಸೂಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ನಡೆದ ಕೇಂದ್ರ ಸಂಪುಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳೂರು ಜೊತೆಗೆ ಅಹಮದಾಬಾದ್‌, ಜೈಪುರ, ಲಕ್ನೋ, ಗುವಾಹಟಿ ಮತ್ತು ತಿರುವನಂತಪುರ ವಿಮಾನ ನಿಲ್ದಾಣಗಳೂ ಖಾಸಗಿ ಸಹಭಾಗಿತ್ವ ಪಡೆಯಲಿರುವ ಪಟ್ಟಿಯಲ್ಲಿ ಸೇರಿವೆ.

ಸುಗಮ ಕಾರ್ಯಾಚರಣೆ ಹಾಗೂ ನಿರ್ವಹಣೆ ಮತ್ತು ಅಭಿವೃದ್ಧಿ ಉದ್ದೇಶದಿಂದ ಸಾರ್ವಜನಿಕ, ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿ ಅನುಸರಿಸಲು ನಿರ್ಧರಿಸಲಾಗಿದೆ. ಇದರಿಂದ ಈ ವಿಮಾನ ನಿಲ್ದಾಣಗಳು ವಿಶ್ವ ದರ್ಜೆಗೆ ಏರಲು ನೆರವಾಗಲಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್‌ ತಿಳಿಸಿದರು.

ವಿಶ್ವ ದರ್ಜೆಯ ಮಟ್ಟಕ್ಕೆ ಏರಿರುವ ನವದೆಹಲಿ, ಬೆಂಗಳೂರು, ಕೊಚ್ಚಿ, ಮುಂಬೈ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳನ್ನು ಸದ್ಯ ಇದೇ ಮಾದರಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT