ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಂದು ವೆಚ್ಚ ಸಲ್ಲ: ಪ್ರಿಯಾಂಕ್‌ ಸೂಚನೆ

Last Updated 3 ಡಿಸೆಂಬರ್ 2018, 19:38 IST
ಅಕ್ಷರ ಗಾತ್ರ

ಬೆಂಗಳೂರು: ದುಂದು ವೆಚ್ಚ ಮಾಡದೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಬೆಳವಣಿಗೆಗೆ ಪೂರಕವಾಗುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಸೋಮವಾರ ಮಾತನಾಡಿದ ಸಚಿವರು, ‘ಪ್ರತಿ ತಿಂಗಳು ಎಲ್ಲ ಅಧಿಕಾರಿಗಳು ತಾವು ನಿರ್ವಹಿಸಿದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಸಲ್ಲಿಸಬೇಕು. ವರ್ಗಾವಣೆ ಬಯಸಿ ತಮ್ಮ ಕಚೇರಿಗೆ ಬರುವ ಅವಶ್ಯಕತೆ ಇಲ್ಲ’ ಎಂದು ಅಧಿಕಾರಿಗಳಿಗೆ ಹೇಳಿದರು.

ಇಲಾಖೆಯ ಸಲಹೆಗಾರರಾದ ನಿವೃತ್ತ ಐಎಎಸ್ ಅಧಿಕಾರಿ ಇ. ವೆಂಕಟಯ್ಯ, ಸರ್ಕಾರದ ಆದೇಶಗಳನ್ನು ಅಧಿಕಾರಿಗಳು ಓದಿ, ಮನನ ಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸಲು, ಬಂಜಾರ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹೀರಾಲಾಲ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಸಂಗಪ್ಪ, ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT