ಬುಧವಾರ, ಡಿಸೆಂಬರ್ 1, 2021
20 °C

ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಮೂಲಕ ಪ್ರಿಯಾಂಕ ಉಪೇಂದ್ರ ಹುಟ್ಟು ಹಬ್ಬ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಕಾಲು ಕಳೆದುಕೊಂಡವರಿಗೆ ರೌಂಡ್‌ ಟೇಬಲ್‌ ಇಂಡಿಯಾ ಮತ್ತು ಲೇಡಿಸ್‌ ಸರ್ಕಲ್‌ ವತಿಯಿಂದ ಕೃತಕ ಕಾಲು ಜೋಡಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

‘ಒಂದು ಸಾವಿರ ರೂಪಾಯಿ ದೇಣಿಗೆ ನೀಡಲು ಮುಂದೆ ಬನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಿದ ಆಂದೋಲನದಿಂದ ₹ 8.5 ಲಕ್ಷ ಹಣವನ್ನು ಈ ಉದ್ದೇಶಕ್ಕಾಗಿ ಬಳಕೆ ಮಾಡಲಾಗುತ್ತಿದೆ.

ಭಗವಾನ್‌ ಜೈನ್‌ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ‘ಸಂಗ್ರಹವಾದ ಹಣದಿಂದ 800 ಜನರಿಗೆ ಕೃತಕ ಕಾಲು ಜೋಡಣೆ ಮಾಡಬಹುದು’ ಎಂದರು.

ಲೇಡಿಸ್‌ ಸರ್ಕಲ್‌ ಸಂಸ್ಥೆ ಮುಖ್ಯಸ್ಥೆ ಆರತಿ ಗುಪ್ತಾ, ‘ಅಶಕ್ತರನ್ನು ಸಬಲೀಕರಣ ಮಾಡುವ ಉದ್ದೇಶಕ್ಕೆ ಸಾಕಷ್ಟು ಮಂದಿ ದೇಣಿಗೆ ನೀಡಿದ್ದಾರೆ’ ಎಂದರು.

ರೋಟರಿ ಸಂಸ್ಥೆಯ ಧೀರಜ್‌ ಬಜಾಜ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು