ಶುಕ್ರವಾರ, ಸೆಪ್ಟೆಂಬರ್ 20, 2019
27 °C

ಮುಂಬಡ್ತಿ: ತೀರ್ಪು ಜಾರಿಗೆ ಆಗ್ರಹ

Published:
Updated:

ಬೆಂಗಳೂರು: ಪರಿಶಿಷ್ಟ ಜಾತಿ, ವರ್ಗದವರಿಗೆ ವಿವಿಧ ಇಲಾಖೆಗಳಲ್ಲಿ ತಡೆಹಿಡಿದಿರುವ ಮುಂಬಡ್ತಿಗಳನ್ನು ನೀಡಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಕೆ.ರಾಮು ಆಗ್ರಹಿಸಿದ್ದಾರೆ.

ಮುಂಬಡ್ತಿ ನೀಡುವ ಮೂಲಕ ಸೇವಾ ನಿವೃತ್ತಿ ಹೊಂದಲಿರುವ ನೌಕರರಿಗೆ ಅನುಕೂಲ ಕಲ್ಪಿಸಬೇಕು.

ಸುಪ್ರೀಂಕೋರ್ಟ್ ತೀರ್ಪು ಪಾಲನೆ ಮಾಡಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿ, ಮುಂಬಡ್ತಿಯಿಂದ ವಂಚಿತರಾಗಿ ಸೇವಾ ನಿವೃತ್ತಿ ಹೊಂದಿದ ನೌಕರರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಪರಿಗಣಿಸಬೇಕು.

ಬಿ.ಕೆ.ಪವಿತ್ರ ಪ್ರಕರಣದಲ್ಲಿ ಕೋರ್ಟ್ ನೀಡುವ ತೀರ್ಪನ್ನು ಜಾರಿಮಾಡಬೇಕು ಎಂದೂ ಅವರು ಮನವಿ ಮಾಡಿದ್ದಾರೆ.

Post Comments (+)