ಸೋಮವಾರ, ಸೆಪ್ಟೆಂಬರ್ 16, 2019
21 °C

ಬಡ್ತಿ ಮೀಸಲಾತಿ ಕಾಯ್ದೆ ಕೂಡಲೇ ಜಾರಿಗೆ ಆಗ್ರಹ

Published:
Updated:

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೊಳಿಸಬೇಕು ಎಂದು ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್‌, ‘ಬಡ್ತಿ ಮೀಸಲಾತಿ ಕಾಯ್ದೆ-2017ರ ಸಿಂಧುತ್ವ ಎತ್ತಿ ಹಿಡಿಯುವ ಮೂಲಕ ಸುಪ್ರೀಂ ಕೋರ್ಟ್‌ ತಳಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದೆ’ ಎಂದರು.

‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಆಸ್ಥೆ ವಹಿಸಿ, ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಗುರುಪ್ರಸಾದ್‌ ಕೆರಗೋಡು, ‘ಕಾಯ್ದೆ ಜಾರಿಗೆ ವಿಳಂಬವಾದರೆ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

Post Comments (+)