ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

Last Updated 14 ಮಾರ್ಚ್ 2019, 20:02 IST
ಅಕ್ಷರ ಗಾತ್ರ

ಬೆಂಗಳೂರು: ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಆಸ್ಟಿನ್‌ ಟೌನ್‌ನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ಪರೀಕ್ಷೆಗಳ ಮಧ್ಯೆಯೂ ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ವಸತಿ ನಿಲಯದ ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೂಲಭೂತ ಸೌಕರ್ಯದ ಕೊರತೆಯಿದೆ ಎಂದು ಆರೋಪಿಸಿದ ಅವರು, ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ್ ರೆಡ್ಡಿ ಮತ್ತು ಸಹಾಯಕ ನಿರ್ದೇಶಕ ಕುಮಾರಸ್ವಾಮಿ ವಿದ್ಯಾರ್ಥಿಗಳ‌ ಸಮಸ್ಯೆಗಳನ್ನು ಆಲಿಸಿದರು. ಮೆನು ಪ್ರಕಾರ ಊಟ ನೀಡುವಂತೆ ನಿಲಯ ಪಾಲಕರಿಗೆ ಸೂಚಿಸಿದರು. ಕೆಲವೇ ದಿನಗಳಲ್ಲಿ ನಿಲಯಕ್ಕೆಕಂಪ್ಯೂಟರ್, ಕ್ರೀಡಾ ಪರಿಕರಗಳು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಅವರು ಭರವಸೆ ನೀಡಿದರು.

ವಸತಿ ನಿಲಯದ ಸಮಸ್ಯೆಗಳ ಕುರಿತು ಬುಧವಾರ ಪ್ರಜಾವಾಣಿ ‘ಊಟ ಕೇಳಬೇಡಿ, ಸಮಸ್ಯೆ ಹೇಳಬೇಡಿ’ ಎನ್ನುವ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT