ಭಾನುವಾರ, ಸೆಪ್ಟೆಂಬರ್ 22, 2019
27 °C

ಪ್ರತಿಭಟನೆ: ಕೇಶಮುಂಡನ, ಬಸ್‌ಗೆ ಬೆಂಕಿ

Published:
Updated:
Prajavani

ಉಯ್ಯಂಬಳ್ಳಿ (ಕನಕಪುರ): ಇಲ್ಲಿನ ಉಯ್ಯಂಬಳ್ಳಿ ಹೋಬಳಿ ದೊಡ್ಡಾಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರು ಸ್ವಪ್ರೇರಣೆಯಿಂದ ಬಂದ್‌ ಮಾಡಿ ಡಿ.ಕೆ.ಶಿವಕುಮಾರ್‌ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿಹಚ್ಚಿ ರಸ್ತೆ ತಡೆ ನಡೆಸಿದರು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ನಲ್ಲಹಳ್ಳಿ ಚಿಕ್ಕೈದೇಗೌಡ ಮತ್ತು ನಾಯ್ಕನಹಳ್ಳಿಯ ಗವಿಯಪ್ಪ ಎಂಬುವವರು ತಲೆ ಬೋಳಿಸಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಸ್‌ಗೆ ಬೆಂಕಿ: ಡಿ.ಕೆ.ಶಿವಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವ ವಿಚಾರ ತಿಳಿದ ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಚುಂಚಿ ಗ್ರಾಮಸ್ಥರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಾರಿಗೆ ಸಂಸ್ಥೆಯ ಬಸ್ಸಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.

Post Comments (+)