ಗುರುವಾರ , ಫೆಬ್ರವರಿ 20, 2020
18 °C

ಬಡ್ತಿ ಮೀಸಲಾತಿ ಕಾಯ್ದೆ ಜಾರಿ ತಂದರೆ ಚಳವಳಿ: ಅಹಿಂಸಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸುಪ್ರೀಂಕೋರ್ಟ್‌ನ ಅಂತಿಮ ತೀರ್ಪು ಬರುವವರೆಗೆ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೊಳಿಸಬಾರದು ಎಂದು ಅಹಿಂಸಾ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ಸಾಮಾನ್ಯವರ್ಗ) ಪದಾಧಿಕಾರಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಅವರಿಗೆ ಮನವಿ ಸಲ್ಲಿಸಿದೆ.

ಕಾಯ್ದೆಯನ್ನು ಜಾರಿಗೊಳಿಸದೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ. ಅಲ್ಲದೆ, ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದ್ದು, ಎರಡು ದಿನಗಳಲ್ಲಿ ವಿಚಾರಣೆ ಮುಗಿಯುತ್ತದೆ. ಫೆಬ್ರುವರಿಯಲ್ಲಿ ತೀರ್ಪು ಪ್ರಕಟವಾಗುವ ನಿರೀಕ್ಷೆ ಇದೆ. ಅಲ್ಲಿಯವರೆಗೆ ಕಾಯಬೇಕು ಎಂದು ಅಹಿಂಸಾ ಅಧ್ಯಕ್ಷ ಎಂ.ನಾಗರಾಜ್‌ ಹೇಳಿದರು.

ಕೆಲವು ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ಸಚಿವರ ಒತ್ತಾಯಕ್ಕೆ ಮಣಿದು ಕಾಯ್ದೆ ಜಾರಿ ಮಾಡಿದರೆ, ರಾಜ್ಯಾದ್ಯಂತ ಹಾಲಿ ಮತ್ತು ನಿವೃತ್ತ ನೌಕರರು ಅಸಹಕಾರ ಚಳವಳಿ ಮಾಡಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದರು.

ಕಳೆದ 27 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು, ಸುದೀರ್ಘ ಅವಧಿಯಲ್ಲಿ ಸಹಸ್ರಾರು ನೌಕರರು ಬಡ್ತಿಯಿಂದ ವಂಚಿತರಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು