ವಿಜಯ ಗುಂಟ್ರಾಳ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

7

ವಿಜಯ ಗುಂಟ್ರಾಳ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

Published:
Updated:
Deccan Herald

ಹುಬ್ಬಳ್ಳಿ: ಮಲ ಸುರಿದುಕೊಂಡು ಪ್ರತಿಭಟನೆ ಮಾಡುವಂತೆ ಪೌರ ಕಾರ್ಮಿಕರಿಗೆ ದುಷ್ಪ್ರೇರಣೆ ನೀಡಿದ ಪರಿಶಿಷ್ಟ ಜಾತಿ ಮತ್ತು ಪಂಗಡದ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಸಂಘ ಸೋಮವಾರ ಪ್ರತಿಭಟನೆ ನಡೆಸಿತು.

ಪಾಲಿಕೆ ಆವರಣದಲ್ಲಿ ಮಲ ಸುರಿದುಕೊಂಡು ಮಾಡಿದ ಪ್ರತಿಭಟನೆಗೆ ಇದೇ ವ್ಯಕ್ತಿ ಕಾರಣ. ಅಮಾಯಕ ಗುತ್ತಿಗೆ ಪೌರ ಕಾರ್ಮಿಕರನ್ನು ಅವರು ದಾರಿ ತಪ್ಪಿಸುತ್ತಿದ್ದಾರೆ. ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪ್ರತಿಭಟನೆ ವೇಳೆ ಮೇಯರ್, ಉಪ ಮೇಯರ್ ಹಾಗೂ ಕಮಿಷನರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಧಿಕಾರಿಗಳನ್ನು ಸಹ ಅವರು ಬೆದರಿಸುತ್ತಾರೆ ಎಂದು ಪ್ರತಿಭಟನಾಕಾರರು ಗಂಭೀರ ಅರೋಪ ಮಾಡಿದರು.

ಕಳೆದ ಏಳೆಂಟು ವರ್ಷಗಳಿಂದ ವಿಜಯ್ ಗುಂಟ್ರಾಳ ಇದೇ ಕೆಲಸ ಮಾಡುತ್ತಿದ್ದಾರೆ. ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳನ್ನು ಹೆದರಿಸುತ್ತಾರೆ. ತಾವು ರಾಜಕೀಯವಾಗಿ ಬೆಳೆಯಲು ಅಮಾಯಕ ಪೌರ ಕಾರ್ಮಿಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ನಿಂಗಪ್ಪ ಡಿ ಮೊರಬದ ದೂರಿದರು.

ಅವರ ಸಂಘವನ್ನು ರದ್ದುಗೊಳಿಸಿ, ಅಧ್ಯಕ್ಷರನ್ನು ಧಾರವಾಡ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಪ್ರಧಾನ ಕಾರ್ಯದರ್ಶಿ ಹೊನ್ನಪ್ಪ ಬಿ ದೇವಗಿರಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !