ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

Last Updated 14 ಆಗಸ್ಟ್ 2019, 19:40 IST
ಅಕ್ಷರ ಗಾತ್ರ

ಯಲಹಂಕ: ಬ್ಯಾಟರಾಯನಪುರ ಹಾಗೂ ಕೊಡಿಗೇಹಳ್ಳಿ ವಾರ್ಡ್‌ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಹಿಂದಿನ ಸರ್ಕಾರದಲ್ಲಿ ಬಿಡುಗಡೆಯಾಗಿದ್ದ ಅನುದಾನವನ್ನು ಬಿಜೆಪಿ ಸರ್ಕಾರ ತಡೆಹಿಡಿದಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಯಲಹಂಕ ವಲಯ ಬಿಬಿಎಂಪಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಅಮೃತಹಳ್ಳಿಯಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುತ್ತ, ಬಿಬಿಎಂಪಿ ಕಚೇರಿಗೆ ಬಂದರು.

ಈ ವೇಳೆ ಮಾತನಾಡಿದ ಬಿಬಿಎಂಪಿ ಸದಸ್ಯ ಪಿ.ವಿ.ಮಂಜುನಾಥಬಾಬು, ‘ಎರಡು ವಾರ್ಡ್‌ಗಳ ಅಭಿವೃದ್ಧಿಗೆ ಮೈತ್ರಿ ಬಿಡುಗಡೆಗೊಳಿಸಿದ್ದ ಸುಮಾರು 83 ಕೋಟಿ ಅನುದಾನವನ್ನು ತಡೆಹಿಡಿಯಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಾಗೂ ಪ್ರಗತಿಯಲ್ಲಿದ್ದ ಕಾಮಗಾರಿಗಳು ಸ್ಥಗಿತಗೊಂಡಿವೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೂಡಲೇ ಅನುದಾನ ಬಿಡುಗಡೆಗೊಳಿಸಬೇಕು’ ಎಂದು ಒತ್ತಾಯಿಸಿದರು.

ಜಂಟಿ ಆಯುಕ್ತ ಅಶೋಕ್ ಅವರಿಗೆ ಮನವಿ ಸಲ್ಲಿಸಿದರು. ಬಿಬಿಎಂಪಿ ಸದಸ್ಯ ಕೆ.ಎಂ.ಚೇತನ್, ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಗೌರೀಶ್, ಕಾಶಿ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT