ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆದಾರರ ನಿರ್ಲಕ್ಷ್ಯ ಆರೋಪ: ಪ್ರತಿಭಟನೆ

ರೈಲ್ವೆ ಗುತ್ತಿಗೆ ಪೌರ ಕಾರ್ಮಿಕ ಮಹಿಳೆ ಸಾವು:
Last Updated 22 ಅಕ್ಟೋಬರ್ 2018, 10:37 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುವ ಲಕ್ಷ್ಮಿದೇವಿ ಆಜಾದಿ (45) ಎಂಬುವರು ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಗುತ್ತಿಗೆದಾರರು ಹಾಗೂ ಇಲಾಖೆ ಸುರಕ್ಷತಾ ಕ್ರಮ ಕೈಗೊಳ್ಳದಿರುವುದೇ ಸಾವಿಗೆ ಕಾರಣ ಎಂದು ಆರೋಪಿಸಿ ಕಾರ್ಮಿಕರು ರೈಲು ನಿಲ್ದಾಣದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಲಕ್ಷ್ಮಿ ಅವರು 12 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಶೌಚಾಲಯ ಸ್ವಚ್ಛಗೊಳಿಸುವ ಕೆಲಸವನ್ನು ಅವರು ಮಾಡುತ್ತಿದ್ದರು. ಆದರೆ ಕಾರ್ಮಿಕರ ಸುರಕ್ಷತೆಗೆ ನೀಡಬೇಕಾಗಿದ್ದ ಮುಖಗವಸು, ಕೈಗವಸು ಗುತ್ತಿಗೆದಾರರಾಗಲಿ, ಇಲಾಖೆಯಾಗಲಿ ನೀಡಿರಲಿಲ್ಲ. ರಾಸಾಯನಿಕ ಬಳಕೆ ಮಾಡಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ಪರಿಣಾಮ ಅದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿತ್ತು ಎಂದು ಪ್ರತಿಭಟನಾಕಾರರು ಆರೋ‍ಪಿಸಿದರು.

ಹದಿನೈದು ದಿನಗಳ ಹಿಂದೆ ಅವರು ಆಸ್ಪತ್ರೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ ಮೃತಪಟ್ಟಿದ್ದಾರೆ. ಈಗಿರುವ ಕಾರ್ಮಿಕರಿಗೂ ಯಾವುದೇ ಸುರಕ್ಷತೆ ಇಲ್ಲವಾಗಿದೆ. ಗುತ್ತಿಗೆದಾರ ಗುರುದೀಪ್ ಸಿಂಗ್ ಅವರು ಕೇವಳ ₹5 ಸಾವಿರ ಪರಿಹಾರ ನೀಡಲು ಬಂದಿದ್ದರು. ಇಲಾಖೆಯವರು ಸಹ ₹2 ಸಾವಿರ ಪರಿಹಾರ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಕಾರ್ಮಿಕ ಮಂಜುನಾಥ ಗಬ್ಬೂರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಸುರಕ್ಷತಾ ಸಾಧನ ನೀಡಬೇಕು ಎಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT