ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಆರೋಪಿಗೆ ಜಾಮೀನು

7

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಆರೋಪಿಗೆ ಜಾಮೀನು

Published:
Updated:

ಬೆಂಗಳೂರು: ದ್ವಿತೀಯ ಪಿ.ಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮೂರನೇ ಆರೋಪಿ ತುಮಕೂರಿನ ಈರಮಲ್ಲಯ್ಯಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಈ ಕುರಿತು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.

‘ಆರೋಪಿಯು ₹ 2 ಲಕ್ಷ ಮೊತ್ತದ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಒದಗಿಸಬೇಕು. ತನಿಖೆಗೆ ಸಹಕರಿಸಬೇಕು. ಸಾಕ್ಷ್ಯನಾಶಪಡಿಸಲು ಯತ್ನಿಸಬಾರದು’ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಆರ್.ಪಿ.ಚಂದ್ರಶೇಖರ್‌, ‘ಪ್ರಕರಣದಲ್ಲಿ ಆರೋಪಿಯ ನೇರ ಪಾತ್ರವಿಲ್ಲ. ಇತರೆ ಆರೋಪಿಗಳಿಗೆ ಈ ಹಿಂದೆಯೇ ಜಾಮೀನು ಮಂಜೂರಾಗಿದೆ. ಈ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‌ಗಳು ವಜಾಗೊಳಿಸಿವೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದರು.

‘ತನಿಖಾಧಿಕಾರಿಗಳು ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಆರೋಪಿಯು 2 ವರ್ಷ 3 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದ್ದರಿಂದ ಜಾಮೀನು ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದ್ದರು.

ಈ ಅಂಶಗಳನ್ನು ನ್ಯಾಯಪೀಠ ಪರಿಗಣಿಸಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !