ಮೂರು ವರ್ಷಗಳಲ್ಲಿ 479 ರಾಜಕಾಲುವೆ ಒತ್ತುವರಿ ತೆರವು

7

ಮೂರು ವರ್ಷಗಳಲ್ಲಿ 479 ರಾಜಕಾಲುವೆ ಒತ್ತುವರಿ ತೆರವು

Published:
Updated:

ಬೆಂಗಳೂರು: ‘ಕಳೆದ ಮೂರು ವರ್ಷಗಳಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 479 ರಾಜಕಾಲುವೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಈ ಕುರಿತಂತೆ ‘ಸಿಟಿಜನ್ ಆಕ್ಷನ್ ಗ್ರೂಪ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜಕಾಲುವೆ ಒತ್ತುವರಿ ತೆರವಿನ ಕುರಿತ ವಸ್ತುಸ್ಥಿತಿ ವರದಿಯನ್ನು ಬಿಬಿಎಂಪಿ ಮುಖ್ಯ ಎಂಜಿನಿಯರ್ (ರಾಜಕಾಲುವೆ ವಿಭಾಗ) ನ್ಯಾಯಪೀಠಕ್ಕೆ ಸಲ್ಲಿಸಿದರು.

ಪ್ರಮಾಣ ಪತ್ರದಲ್ಲಿ ಏನಿದೆ?: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 2,515 ಕಡೆ ರಾಜಕಾಲುವೆ ಒತ್ತುವರಿ ಆಗಿರುವುದನ್ನು ಗುರುತಿಸಲಾಗಿದೆ. ಇದರಲ್ಲಿ 2016ರಿಂದ 2019ರವರೆಗೆ ಒಟ್ಟು 479 ಒತ್ತುವರಿ ತೆರವು ಗೊಳಿಸಲಾಗಿದೆ ಎಂದು ವಿವರಿಸಲಾಗಿದೆ. 1,637 ಒತ್ತುವರಿಗಳ ಸರ್ವೆ ಕಾರ್ಯ ನಡೆಸಬೇಕಿದೆ. ಒಟ್ಟಾರೆ 450 ಒತ್ತುವರಿಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ. 399 ಒತ್ತುವರಿ ತೆರವುಗೊಳಿಸಲು ಗುರುತಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !