‘ಪಕ್ಷ ತಾಯಿ ಇದ್ದಂತೆ, ಮೋಸ ಸಲ್ಲ’

ಮಂಗಳವಾರ, ಜೂನ್ 18, 2019
23 °C
ಕೆಪಿಸಿಸಿ ಕಚೇರಿಯಲ್ಲಿ ರಾಜೀವ್‌ಗಾಂಧಿ 28ನೇ ಪುಣ್ಯತಿಥಿ

‘ಪಕ್ಷ ತಾಯಿ ಇದ್ದಂತೆ, ಮೋಸ ಸಲ್ಲ’

Published:
Updated:
Prajavani

ಬೆಂಗಳೂರು: ‘ಪಕ್ಷ ತಾಯಿ ಇದ್ದಂತೆ. ಯಾರಾದರೂ ಮುಜುಗರ ತರುವ ಕೆಲಸ ಮಾಡಿದರೆ ಅಥವಾ ವಿರುದ್ಧವಾದ ಹೇಳಿಕೆ ನೀಡಿದರೆ ಅದನ್ನು ನಿಯಂತ್ರಿಸುವ ಕೆಲಸ ಆಗಬೇಕು. ಪಕ್ಷದ ಶಿಸ್ತು ಪಾಲಿಸದವರ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.

ರಾಜೀವ್‌ಗಾಂಧಿ 28ನೇ ಪುಣ್ಯತಿಥಿ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ‘ಸರ್ವಸ್ವವನ್ನೂ ತ್ಯಾಗ ಮಾಡಿ, ಕಾಂಗ್ರೆಸ್ ನನ್ನ ಜೀವನ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ. ಆ ನಾಯಕನ‌ ಜೊತೆ ಹೇಗೆ ನಡೆದುಕೊಳ್ಳಬೇಕು ಎಂದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು’ ಎಂದರು.

‘18 ವರ್ಷಕ್ಕೆ ಮತದಾನದ ಹಕ್ಕು ತಂದುಕೊಟ್ಟವರು ರಾಜೀವ್‌ ಗಾಂಧಿ. ಆದರೆ, ಯುವಕರಿಗೆ ಈ ಸತ್ಯ ಅರಿವಾಗಿಲ್ಲ. ಮೋದಿಪರ ಯುವಕರಿದ್ದಾರೆ ಎಂದು ಹೇಳುತ್ತಾರೆ. ಯುವಕರ ಕಣ್ಣಿಗೆ ಪೊರೆ ಆವರಿಸಿದೆ. ತಮಗೆ ಮತದಾನದ ಹಕ್ಕು ನೀಡಿದ ರಾಜೀವ್‌ ಗಾಂಧಿ ಹಾಗೂ ಕಾಂಗ್ರೆಸ್‌ ಪಕ್ಷ ಎಂಬ ಸತ್ಯ ತಿಳಿಸುವ ಕೆಲಸವನ್ನು ಮಾಡಬೇಕು’ ಎಂದು ತಿಳಿಸಿದರು.

‘ಚಿಕ್ಕ ವಯಸ್ಸಿನಲ್ಲೇ ರಾಜೀವ್‌ ಗಾಂಧಿ ತೀರಿಕೊಂಡಿದ್ದು ಪಕ್ಷಕ್ಕೆ ತುಂಬಲಾರದ ನಷ್ಟ. ಯುವಕರಿಗೆ ಮತದಾನದ ಹಕ್ಕು ನೀಡಿದ್ದರಿಂದ ನಮಗೆ ಹಿನ್ನೆಡೆಯಾಗುತ್ತಿದೆ. ಯುವಕರ ದಾರಿ ತಪ್ಪಿಸಿ ಬಿಜೆಪಿ ಮತ ಪಡೆಯುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

‘ರಾಜೀವ್ ಬಗ್ಗೆ ಮೋದಿ ಮಾತು ಅವರ ಕೆಟ್ಟ ನಡವಳಿಕೆ ತೋರಿಸುತ್ತದೆ. ಮತಗಟ್ಟೆ ಸಮೀಕ್ಷೆಗಳನ್ನು ನಂಬಲು ಸಾಧ್ಯವಿಲ್ಲ. ಕೇಂದ್ರದಲ್ಲಿ ಪರ್ಯಾಯ ಸರ್ಕಾರ ‌ರಚನೆಯಾಗುವ ವಿಶ್ವಾಸವಿದೆ’ ಎಂದರು.

‘ಆಧುನಿಕ ಭಾರತ ನಿರ್ಮಾಣಕ್ಕೆ ರಾಜೀವ್ ಕೊಡುಗೆ ಮಹತ್ವದ್ದು. ಆದರೆ ಭಯ, ಹಣದ ಕಾರಣದಿಂದ ಮಾಧ್ಯಮಗಳು ಜನರನ್ನು ದಾರಿ ತಪ್ಪಿಸುತ್ತಿವೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ದೂರಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !