ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿಯಲ್ಲಿ ಗೊಂದಲ ಆಯೋಗಕ್ಕೆ ರಾಮಲಿಂಗಾರೆಡ್ಡಿ ದೂರು

Last Updated 23 ಏಪ್ರಿಲ್ 2019, 20:25 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಿಂದ ಸಾಕಷ್ಟು ಹೆಸರು ಕೈಬಿಟ್ಟಿರುವುದು ಆತಂಕಕಾರಿ ಸಂಗತಿ. ಈ ವಿಷಯವನ್ನು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ’ ಎಂದು ಕಾಂಗ್ರೆಸ್‌ ಶಾಸಕ ರಾಮಲಿಂಗಾ ರೆಡ್ಡಿ ಹೇಳಿದರು.

ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮಂಗಳವಾರ ಈ ಬಗ್ಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಮತದಾರರ ಪಟ್ಟಿಯಲ್ಲಿ ಗೊಂದಲಗಳಿವೆ. ಮನೆ ಖಾಲಿ ಮಾಡಿದವರ ಮತ್ತು ಮೃತಪಟ್ಟವರ ಹೆಸರುಗಳು ಪಟ್ಟಿಯಲ್ಲಿವೆ. ಆದರೆ, ನಿಜವಾದ ಮತದಾರರ ಹೆಸರು ಇಲ್ಲ. ಒಂದೇ ಮನೆಯಲ್ಲಿರುವ ಮತದಾರರ ಹೆಸರು ಬೇರೆ ಬೇರೆ ಮತಗಟ್ಟೆಗಳಲ್ಲಿವೆ. ಹಲವು ಮತದಾರರ ಬಳಿ ಗುರುತಿನ ಚೀಟಿ ಇದ್ದರೂ ಪಟ್ಟಿಯಲ್ಲಿ ಹೆಸರು ಇಲ್ಲ’ ಎಂದರು.

‘ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಟ್ಟಿಯಲ್ಲಿದ್ದವರ ಹೆಸರು ಈಗ ಇಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮನವಿ ಸಲ್ಲಿಸಿದ್ದೇನೆ’ ಎಂದು ಅವರು ತಿಳಿಸಿದರು.

ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, ‘ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಜನ ಮತ ಚಲಾಯಿಸುವ ಹಕ್ಕು ಕಳೆದುಕೊಂಡಿದ್ದಾರೆ. ಮುಂಬರುವ ಬಿಬಿಎಂಪಿ ಚುನಾವಣೆವರೆಗೂ ಈ ಸಮಸ್ಯೆ ಮುಂದುವರೆಯಬಾರದು. ಮತದಾರರ ಪಟ್ಟಿಯಿಂದ ಕೈ ಬಿಟ್ಟು ಹೋಗಿರುವ ಮತದಾರರ ಹೆಸರನ್ನು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದ್ದೇನೆ’ ಎಂದರು.

‘ಬಿಟಿಎಂ ಲೇಔಟ್‌, ಜಯನಗರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಷ್ಟೆ ಅಲ್ಲ, ಇಡೀ ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ಗೊಂದಲವಿದೆ. ಪಟ್ಟಿಯಿಂದ ಹೆಸರು ಕೈ ಬಿಟ್ಟು ಹೋದವರ ವಿವರ ನೀಡುವಂತೆ ಆಯೋಗ ನಮ್ಮನ್ನು ಕೇಳಿದೆ. ಆದಷ್ಟು ಪ್ರಯತ್ನಪಟ್ಟು ಮಾಹಿತಿ ಕಲೆ ಹಾಕುತ್ತೇವೆ. ಪಟ್ಟಿಯಲ್ಲಿ ಹೆಸರು ಇಲ್ಲದ ಮತದಾರರು ಕೂಡ ಸ್ವಯಂಪ್ರೇರಣೆಯಿಂದ ಆಯೋಗಕ್ಕೆ ಅಥವಾ ನಮಗೆ ಮಾಹಿತಿ ನೀಡಬಹುದು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT