ಸಂಗೀತೋತ್ಸವ ವೇದಿಕೆ ನಿರ್ಮಾಣಕ್ಕೆ ಚಾಲನೆ

7

ಸಂಗೀತೋತ್ಸವ ವೇದಿಕೆ ನಿರ್ಮಾಣಕ್ಕೆ ಚಾಲನೆ

Published:
Updated:
Prajavani

ಬೆಂಗಳೂರು: ಶ್ರೀರಾಮ ಸೇವಾ ಮಂಡಳಿಯ ‘81ನೇ ಶ್ರೀರಾಮನವಮಿ ಅಂತರರಾಷ್ಟ್ರೀಯ ಸಂಗೀತೋತ್ಸವ’ದ ವೇದಿಕೆ ಮತ್ತು ತಾತ್ಕಾಲಿಕ ಸಭಾಂಗಣ ನಿರ್ಮಾಣಕ್ಕೆ ಚಾಮರಾಜಪೇಟೆಯ ಹಳೆಕೋಟೆ ಹೈಸ್ಕೂಲ್‌ ಮೈದಾನದಲ್ಲಿ ಗುರುವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಇದು ದೇಶದ ಅತಿದೊಡ್ಡ ಶಾಸ್ತ್ರೀಯ ಸಂಗೀತೋತ್ಸವಗಳಲ್ಲಿ ಒಂದಾಗಿದ್ದು, ಏಪ್ರಿಲ್‌ 6ರಿಂದ ಮೇ6ರವರೆಗೆ ನಡೆಯಲಿದೆ. 

‘ಪ್ರಜಾವಾಣಿ’ ಜತೆ ಮಾತನಾಡಿದ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಸ್.ಎನ್.ವರದರಾಜ್,‘ಸುಮಾರು 10 ಸಾವಿರ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಿಸಬಹುದಾದ ಪೆಂಡಾಲ್ ನಿರ್ಮಾಣ ಮಾಡಲಾಗುತ್ತದೆ. ಅದಕ್ಕೆ ₹30 ಲಕ್ಷ ವೆಚ್ಚವಾಗುತ್ತದೆ. ಕಾರ್ಯಕ್ರಮಕ್ಕೆ ಅಂದಾಜು ಒಂದೂವರೆ ಕೋಟಿ ರೂಪಾಯಿ ಖರ್ಚಾಗುತ್ತದೆ’ ಎಂದು ತಿಳಿಸಿದರು.

‘ಕರ್ನಾಟಕ ಮತ್ತು ಹಿಂದೂಸ್ತಾನಿ ಜುಗಲ್‌ಬಂದಿ ಈ ಬಾರಿಯ ವಿಶೇಷ. ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯ ಅವರು ಮೊದಲ ಬಾರಿಗೆ ಹಿಂದೂಸ್ತಾನಿ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ಸ್ಥಳೀಯ ಗಾಯಕರು ಸಂಗೀತ ಸುಧೆಯನ್ನು ಉಣಬಡಿಸಲಿದ್ದಾರೆ’ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !