ಗುರುವಾರ , ಮಾರ್ಚ್ 4, 2021
26 °C
ಪ್ರತಿಭಟನೆಗೆ ಮಣಿದ ಸರ್ಕಾರ

ರಂದೀಪ್‌ ವರ್ಗಾವಣೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾಗರಿಕರು ಹಾಗೂ ಪಾಲಿಕೆ ಸಿಬ್ಬಂದಿಯ ಪ್ರತಿಭಟನೆಗೆ ಮಣಿದ ಸರ್ಕಾರ, ಬಿಬಿಎಂಪಿ ಹೆಚ್ಚುವರಿ ಆಯುಕ್ತ (ಆಡಳಿತ) ರಂದೀಪ್‌ ಅವರ ವರ್ಗಾವಣೆಯನ್ನು ಬುಧವಾರ ರದ್ದುಪಡಿಸಿದೆ.

ಐಎಎಸ್‌ ಅಧಿಕಾರಿ ರಂದೀಪ್‌ ಅವರು ಆರು ತಿಂಗಳ ಹಿಂದೆ ಪಾಲಿಕೆಯಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರನ್ನಾಗಿ ವರ್ಗ ಮಾಡಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ನ.30ರಂದು ಆದೇಶ ಹೊರಡಿಸಿತ್ತು.

ಕಸ ವಿಲೇವಾರಿ ವ್ಯವಸ್ಥೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದ ರಂದೀಪ್‌ ಅವರನ್ನು ಪಾಲಿಕೆಯಲ್ಲೇ ಉಳಿಸಿಕೊಳ್ಳುವ ಸಲುವಾಗಿ ಆನ್‌ಲೈನ್‌ ಸಹಿ ಸಂಗ್ರಹ ಅಭಿಯಾನ ನಡೆದಿತ್ತು. ಅವರ ವರ್ಗಾವಣೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಪಾಲಿಕೆಯ ಅಧಿಕಾರಿಗಳ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದವರು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು