ಸುಪಾರಿ ಪ್ರಕರಣ: ರವಿ ಬೆಳಗೆರೆ ವಿರುದ್ಧದ ವಿಚಾರಣೆಗೆ ತಡೆ

ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಡಿ ಪತ್ರಕರ್ತ ರವಿ ಬೆಳಗೆರೆ ವಿರುದ್ಧ ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಕುರಿತಂತೆ ರವಿ ಬೆಳಗೆರೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
‘ಪೊಲೀಸರ ತನಿಖೆ ಅಸಮಂಜಸವಾಗಿದೆ, ಸಾಕ್ಷ್ಯಾಧಾರಗಳ ಕೊರತೆಯಿದೆ ಮತ್ತು ಅವಾಸ್ತವಿಕ ಸಂಗತಿಗಳಿಂದ ಕೂಡಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು’ ಎಂಬುದು ರವಿ ಬೆಳಗೆರೆ ಕೋರಿಕೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.