ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರವಿ ಪೂಜಾರಿ ವಶಕ್ಕೆ ಕೇಂದ್ರದ ಸಮ್ಮತಿ

Last Updated 19 ಮಾರ್ಚ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಆಫ್ರಿಕಾದ ಸೆನೆಗಲ್‌ನಲ್ಲಿ ಸೆರೆ ಸಿಕ್ಕಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ವಶಕ್ಕೆ ಪಡೆಯಲು ರಾಜ್ಯ ಪೊಲೀಸರಿಗೆ ಕೇಂದ್ರ ವಿದೇಶಾಂಗ ಸಚಿವಾಲಯ ಸಮ್ಮತಿ ಸೂಚಿಸಿದೆ. ಇದರ ಬೆನ್ನಲ್ಲೇ ರವಿ ಪೂಜಾರಿ ಸಹ ತನ್ನ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕಾನೂನು ಹೋರಾಟ ಪ್ರಾರಂಭಿಸಿದ್ದಾನೆ.

‘ಆರೋಪಿಯನ್ನು ವಶಕ್ಕೆ ಪಡೆಯಲು ಸ್ಥಳೀಯ ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೀಗಾಗಿ, ಅಲ್ಲಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ’ ಎಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ತಿಳಿಸಿದರು. ‘ರವಿ ಪೂಜಾರಿ ವಿರುದ್ಧ ರಾಜ್ಯದಲ್ಲಿ 97 ಪ್ರಕರಣ ದಾಖಲಾಗಿದ್ದು, ಅವುಗಳ ಮಾಹಿತಿಯನ್ನು ಸೆನೆಗಲ್ ಭಾಷೆಗೆ ತರ್ಜುಮೆ ಮಾಡಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. 2007ರಲ್ಲಿ ತಿಲಕ್‌ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಆತನನ್ನು ವಶಕ್ಕೆ ಪಡೆಯಲು ನಿರ್ಧರಿಸಿದ್ದೇವೆ’ ಎಂದರು.

₹7 ಕೋಟಿ ವ್ಯಯ: ‘ಭಾರತದ ತನಿಖಾ ಸಂಸ್ಥೆಗಳ ವಿರುದ್ಧ ಕಾನೂನು ಸಮರ ಸಾರಿರುವ ರವಿ ಪೂಜಾರಿ, ತನ್ನ ಪರ ವಾದಿಸಲು ₹7 ಕೋಟಿ ವ್ಯಯಿಸಿ ಖ್ಯಾತ ವಕೀಲರನ್ನೇ ನೇಮಿಸಿಕೊಂಡಿದ್ದಾನೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT