ಬಾಲಕಿ ಅಪಹರಿಸಿ ಅತ್ಯಾಚಾರ: ಅಪರಾಧಿಗೆ 10 ವರ್ಷ ಶಿಕ್ಷೆ

7

ಬಾಲಕಿ ಅಪಹರಿಸಿ ಅತ್ಯಾಚಾರ: ಅಪರಾಧಿಗೆ 10 ವರ್ಷ ಶಿಕ್ಷೆ

Published:
Updated:
Deccan Herald

ಹುಬ್ಬಳ್ಳಿ: ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿದ ಟಿಪ್ಪು ಸುಲ್ತಾನ ಎಂಬಾತನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಇಲ್ಲಿನ ಎರಡನೇ ಹೆಚ್ಚುವರಿ ವಿಶೇಷ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.

ನಾಗಶೆಟ್ಟಿ ಕೊಪ್ಪದ ನಿವಾಸಿಯಾದ ಅಪರಾಧಿ, ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಬಾಲಕಿಯನ್ನು 2015 ನವೆಂಬರ್ 27ರಂದು ಅಪಹರಿಸಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಜಗದೀಶ ಹಂಚಿನಾಳ, ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು.

ಮೊದಲು ಅಪಹರಣ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಯನ್ನು ಬಂಧಿಸಿ ಬಾಲಕಿಯನ್ನು ವಿಚಾರಣೆಗೆ ಒಳಪಡಿಸಿದಾಗ ಅತ್ಯಾಚಾರ ಮಾಡಿದ್ದು ಗೊತ್ತಾಯಿತು. ಆದ್ದರಿಂದ ಪೋಸ್ಕೊ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಕಾರದ ಪರವಾಗಿ ಎಸ್‌.ಎಸ್‌. ದೊಡ್ಡಲಿಂಗಣ್ಣವರ ವಾದ ಮಂಡಿಸಿದ್ದರು. ವಾದ– ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಸಿ.ಎಂ. ಗಂಗಾಧರ ಮೇಲಿನ ಆದೇಶ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !