ಮಂಗಳವಾರ, ಸೆಪ್ಟೆಂಬರ್ 21, 2021
25 °C

ರೇವಾ ವಿಶ್ವವಿದ್ಯಾಲಯ: ಸಂಶೋಧನಾ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರೇವಾ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಸಂಶೋಧನಾ ಸಮ್ಮೇಳನ ವೈಜ್ಞಾನಿಕ ಆವಿಷ್ಕಾರಗಳ ಕುರಿತ ಇತ್ತೀಚಿನ ಬೆಳವಣಿಗೆಗಳ ಕುರಿತ ಜ್ಞಾನ ವಿನಿಮಯಕ್ಕೆ ವೇದಿಕೆ ಕಲ್ಪಿಸಿತು.

ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ತೊಡಗಿರುವ ಜಗತ್ತಿನ ಪ್ರಮುಖ ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಗಳು ಹಾಗೂ ಹೆಸರಾಂತ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಈ ಕ್ಷೇತ್ರದ ಇತ್ತೀಚಿನ ಒಲವುಗಳ ಕುರಿತು ಮಾಹಿತಿ ಹಂಚಿಕೊಂಡರು. ವಿಶ್ವವಿದ್ಯಾನಿಲಯದ ಸಂಶೋಧಕರ ಸಾಧನೆಗಳನ್ನು ಸಮ್ಮೇಳನದಲ್ಲಿ ಪ್ರದರ್ಶಿಸಲಾಯಿತು.

ಅಮೆರಿಕದ ಅಲಬಾಮ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್‌ ವಿಭಾಗದ ಮುಖ್ಯಸ್ಥ ಪ್ರೊ. ಹೆಗ್ಗೆರೆ ರಂಗನಾಥ್ ಮತ್ತು ಇಂದೋರ್‌ನ ಐಐಎಂ ಮಾರ್ಕೆಟಿಂಗ್‌ ಪ್ರಾಧ್ಯಾಪಕ ಡಾ. ರಾಜೇಂದ್ರ ನರಗುಂದಕರ್‌ ಅವರು ಸಮ್ಮೇಳನವನ್ನು ಗುರುವಾರ ಉದ್ಘಾಟಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.