ಒತ್ತುವರಿ ತೆರವು: ಬೀದಿ ವ್ಯಾಪಾರಿಗಳ ಗೋಳಾಟ

ಗುರುವಾರ , ಮೇ 23, 2019
30 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಒತ್ತುವರಿ ತೆರವು: ಬೀದಿ ವ್ಯಾಪಾರಿಗಳ ಗೋಳಾಟ

Published:
Updated:
Prajavani

ಬೆಂಗಳೂರು: ದೊಡ್ಡಬಳ್ಳಾಪುರ ಮತ್ತು ಕೊರಟಗೆರೆ ಮಾರ್ಗದಲ್ಲಿ ಬೀದಿ ಬದಿ ಹೂ, ಹಣ್ಣು ತರಕಾರಿ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದವರ ಮಳಿಗೆಗಳನ್ನು ಶನಿವಾರ ತೆರವು ಮಾಡಲಾಯಿತು.

ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆನಡೆಯಿತು.

ಏಕಾಏಕಿ ತೆರವುಗೊಳಿಸಲು ಬಂದ ಅಧಿಕಾರಿಗಳ ಕ್ರಮವನ್ನು ಖಂಡಿಸುತ್ತಲೇ, ಬೀದಿ ವ್ಯಾಪಾರಿಗಳು ತಮ್ಮ ಹೂ, ಹಣ್ಣು, ತರಕಾರಿಗಳನ್ನು ಎತ್ತಿಟ್ಟುಕೊಂಡರು.

‘ಪಾದಚಾರಿ ರಸ್ತೆಯಲ್ಲಿ ಅಕ್ರಮವಾಗಿ ಅಂಗಡಿ ಇಟ್ಟುಕೊಂಡಿದ್ದರಿಂದ ಪಟ್ಟಣದ ರಸ್ತೆಗಳು ಕಿರಿದಾಗಿದ್ದು, ಸಂಚಾರ ದಟ್ಟಣೆ ಉಂಟಾಗಿ, ನಿತ್ಯ ಅಪಘಾತಗಳು ಸಂಭವಿಸುತ್ತಲೆ ಇವೆ. ಕ್ರಮಕೈಗೊಳ್ಳಿ ಎಂದು ಸಾರ್ವಜನಿಕರಿಂದ ಹಲವು ದೂರುಗಳು ಬಂದಿದ್ದವು. ಅಂಗಡಿಗಳನ್ನು ತೆರವುಗೊಳಿಸುವಂತೆ ನಾವು ವ್ಯಾಪಾರಿಗಳಿಗೆ ಹಲವು ಬಾರಿ ಹೇಳಿದ್ದರೂ ತೆರವುಗೊಳಿಸಿರಲಿಲ್ಲ. ಹಾಗಾಗಿ, ತಾಲ್ಲೂಕು ಆಡಳಿತದಿಂದ ತೆರವುಗೊಳಿಸುತ್ತಿದ್ದೇವೆ’ ಎಂದು ತಹಶೀಲ್ದಾರ‍ ರಾಜಶೇಖರ್‌ ಹೇಳಿದರು.

‘ರಾಷ್ಟ್ರೀಯ ಹೆದ್ದಾರಿ 209 ದೇವನಹಳ್ಳಿ ರಸ್ತೆ ವಿಸ್ತರಣೆ ಉದ್ದೇಶದಿಂದ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಜಮೀನು ವಶಪಡಿಸಿಕೊಂಡು ಅದಕ್ಕೆ ಪರಿಹಾರವನ್ನು ನೀಡಿದೆ. ಸಂಬಂಧಿಸಿದವರು ಪರಿಹಾರವನ್ನು ಪಡೆದುಕೊಂಡಿದ್ದಾರೆ. ಆದರೆ, ಜಮೀನು ಬಿಡದೆ ಸತಾಯಿಸುತ್ತಿದ್ದಾರೆ. ಪ್ರಾಧಿಕಾರದಿಂದಲೂ ಜಮೀನು ತೆರವುಗೊಳಿಸಿಕೊಡುವಂತೆ ಮನವಿ ಬಂದ ಹಿನ್ನಲೆಯಲ್ಲಿ, ಪ್ರಾಧಿಕಾರಕ್ಕೆ ಸೇರುವ ಜಾಗದಲ್ಲಿನ ಮನೆ ಹಾಗೂ ಅಂಗಡಿಗಳನ್ನೂ ತೆರವುಗೊಳಿಸುತ್ತೇವೆ’ ಎಂದರು.

ನನ್ನ ದನಿ ಕೇಳಿಸಿಕೊಳ್ಳಲಿಲ್ಲ: ‘ಜೀವನೋಪಾಯಕ್ಕಾಗಿ ಹಣ್ಣಿನ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದೇನೆ. ಈಗ ಇದನ್ನೂ ಕೆಡವಿದರು. ಒಂದು ವಾರ ಸಮಯಾವಕಾಶ ಕೊಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡರೂ ಅವರಿಗೆ ನನ್ನ ದನಿ ಕೇಳಿಸಲಿಲ್ಲ. ಈಗ ನಾ ಎಲ್ಲಿಗೆ ಹೋಗಲಿ?’ ಎಂದು ಚೆನ್ನಮ್ಮ ಅಳಲು ತೋಡಿಕೊಂಡರು. 

‘ಸರ್ಕಾರ ಕೊಟ್ಟಿರುವ ₹10 ಲಕ್ಷ ಪರಿಹಾರ ಧನ ಯಾವುದಕ್ಕೆ ಸಾಲುತ್ತೆ ಹೇಳಿ? ನನಗೆ ಇರೋದಕ್ಕೆ ನೆಲೆಯೂ ಇಲ್ಲ’ ಎಂದು ಕಣ್ಣೀರು ಹಾಕಿದರು. 

‘ಹತ್ತಾರು ವರ್ಷಗಳಿಂದ ಹೂ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದೇವೆ. ವ್ಯಾಪಾರಕ್ಕೆ ಬೇರೆಡೆ ಅವಕಾಶವನ್ನು ಮಾಡಿಕೊಡದೆ, ಯಾವುದೇ ಮುನ್ಸೂಚನೆ ನೀಡದೆ ಅಂಗಡಿ ಎತ್ತಂಗಡಿ ಮಾಡುತ್ತಿದ್ದಾರೆ’ ಎಂದರು ಅಂಗವಿಕಲೆ ಪಾರ್ವತಮ್ಮ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !