ಭಾನುವಾರ, ಅಕ್ಟೋಬರ್ 20, 2019
25 °C

ಎಸ್‌ಬಿಐನಿಂದ ಬಟ್ಟೆ ಚೀಲ ವಿತರಣೆ

Published:
Updated:
Prajavani

ಬೆಂಗಳೂರು: ‘ಪ್ಲಾಸ್ಟಿಕ್‌ ಮುಕ್ತ ಭಾರತ’ ನಿರ್ಮಾಣಕ್ಕೆ ಪಣ ತೊಟ್ಟಿರುವ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ತನ್ನ ಗ್ರಾಹಕರಿಗೆ ಐದು ಸಾವಿರ ಬಟ್ಟೆ ಚೀಲಗಳನ್ನು ಹಂಚಿದೆ.

‘ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್‌ ನಿಷೇಧಿಸಿರುವ ಸಂಸ್ಥೆ’ ಎಂದು ಎಸ್‌ಬಿಐಯನ್ನು ಘೋಷಿಸಲು ಸರ್ಕಾರ ನಿರ್ದೇಶನವನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಸಂಸ್ಥೆ ಕಾರ್ಯೋನ್ಮುಖವಾಗಿದೆ ಎಂದು ಎಸ್‌ಬಿಐ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ಅಭಿಜಿತ್‌ ಮಜುಂದಾರ್‌ ಹೇಳಿದರು.

ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಜಾಗೃತಿ ಮೂಡಿಸಲು ‘ಸ್ವಚ್ಛತೆಯೇ ಸೇವೆ’ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಸೆ.11ರಿಂದ ಅ.2ರ ಅವಧಿಯಲ್ಲಿ ನಡೆದ ಈ ಅಭಿಯಾನದಲ್ಲಿ ಗ್ರಾಹಕರಿಗೆ ವಿವಿಧ ಶಾಖೆಗಳ ಮೂಲಕ 5000 ಬಟ್ಟೆಯ ಚೀಲಗಳನ್ನು ಹಂಚಲಾಗಿದ್ದು, ಮೈಸೂರು ರೈಲ್ವೆ ನಿಲ್ದಾಣಕ್ಕೆ ಪ್ಲಾಸ್ಟಿಕ್ ಪುಡಿ ಮಾಡುವ ಯಂತ್ರ ನೀಡಲಾಗಿದೆ ಎಂದು ಅವರು ತಿಳಿಸಿದರು.

ಕಬ್ಬನ್‌ ಪಾರ್ಕ್‌ನಲ್ಲಿ ಫಲಕಗಳ ಪ್ರದರ್ಶನ, ಪ್ಲಾಸ್ಟಿಕ್‌ ಬಳಕೆಯ ವಿರುದ್ಧ ಯಕ್ಷಗಾನ ಪ್ರಾತ್ಯಕ್ಷಿಕೆಯನ್ನೂ ಹಮ್ಮಿಕೊಳ್ಳಲಾಗಿತ್ತು ಎಂದು ಅವರು ತಿಳಿಸಿದರು.

Post Comments (+)