ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಾಲೆ ಕಡೆ ನನ್ನ ನಡೆ’ ಅಭಿಯಾನಕ್ಕೆ ಚಾಲನೆ

Last Updated 22 ಮೇ 2019, 20:02 IST
ಅಕ್ಷರ ಗಾತ್ರ

ಬೆಂಗಳೂರು:ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್‌ಆಫ್ ಇಂಡಿಯಾ (ಎಸ್‌ಐಒ) ರಾಜ್ಯ ಘಟಕದ ವತಿಯಿಂದ ಜೂನ್‌ 20ರವರೆಗೆ 'ಶಾಲೆ ಕಡೆ ನನ್ನ ನಡೆ’ ಶೈಕ್ಷಣಿಕ ಜಾಗೃತಿ ನಡೆಯಲಿದ್ದು, ಬುಧವಾರ ಇಲ್ಲಿ ಚಾಲನೆ ನೀಡಲಾಯಿತು.

ಎಸ್‌ಐಒ ರಾಜ್ಯ ಘಟಕದ ಅಧ್ಯಕ್ಷ ನಿಹಾಲ್‌ ಕಿದಿಯೂರು ಅಭಿಯಾನದ ಪೋಸ್ಟರ್‌ ಬಿಡುಗಡೆ ಮಾಡಿ ಚಾಲನೆ ನೀಡಿದರು. ರಾಜ್ಯದಲ್ಲಿ ಶಾಲೆ ಬಿಟ್ಟ ಎಲ್ಲ ಮಕ್ಕಳನ್ನೂಶಾಲೆಗೆ ಸೇರಿಸಲು ಪ್ರಯತ್ನಿಸುವುದು, ಶೈಕ್ಷಣಿಕ ಗುಣಮಟ್ಟದ ಹೆಚ್ಚಳ ಮತ್ತು ಮೂಲಸೌಕರ್ಯ ಒದಗಿಸಲು ಸರ್ಕಾರವನ್ನು ಒತ್ತಾಯಿಸುವ ಮೂರು ಉದ್ದೇಶ ಈ ಅಭಿಯಾನದ ಹಿಂದೆ ಇದೆ.

‘ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶೈಕ್ಷಣಿಕ ಸಮೀಕ್ಷೆ, ಶಾಲೆ ಬಿಟ್ಟ ಮಕ್ಕಳ ಮನೆಗೆ ಹೋಗಿ ದಾಖಲಾತಿಗೆ ಪ್ರಯತ್ನ, ಶೈಕ್ಷಣಿಕಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕಗಳು, ಸಾರ್ವಜನಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಮಾಧ್ಯಮ ಕಾರ್ಯದರ್ಶಿಯಾಸೀನ್ ಕೋಡಿಬೆಂಗ್ರೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT