ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಆಭರಣ ಅಂಗಡಿಗಳ ಶೋಧ

Last Updated 7 ನವೆಂಬರ್ 2018, 20:09 IST
ಅಕ್ಷರ ಗಾತ್ರ

ಬೆಂಗಳೂರು: ನಗರವೂ ಸೇರಿ‌ದಂತ ರಾಜ್ಯದಾದ್ಯಂತ ಪ್ರತಿಷ್ಠಿತ ಆಭರಣ ಅಂಗಡಿಗಳನ್ನು ಶೋಧಿಸಿದ ಕಾನೂನು ಮತ್ತು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳು ತೂಕ ಹಾಗೂ ಅಳತೆಗೆ ಸಂಬಂಧಿಸಿದ ಲೋಪಗಳನ್ನು ಪತ್ತೆ ಹಚ್ಚಿ 172 ಮೊಕದ್ದಮೆಗಳನ್ನು ದಾಖಲಿಸಿ ₹ 1.30 ಲಕ್ಷ ದಂಡ ವಸೂಲಿ ಮಾಡಿದ್ದಾರೆ.

ಮೈಸೂರು, ಮಂಡ್ಯ, ಹಾಸನ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹುಬ್ಬಳ್ಳಿ, ಕಾರವಾರ, ಕಲಬುರ್ಗಿ, ರಾಯಚೂರು, ಬಳ್ಳಾರಿ, ಬೀದರ್‌, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ 695 ಕಡೆ ತಪಾಸಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚಿನ್ನ, ಬೆಳ್ಳಿ ಖರೀದಿ ಸಮಯದಲ್ಲಿವ್ಯಾಪಾರಸ್ಥರು ಮೋಸ ಮಾಡುವ ಪ್ರಕರಣಗಳು ಕಂಡು ಬಂದರೆ ಕಾನೂನು ಮಾಪನಶಾಸ್ತ್ರ ಇಲಾಖೆಯ ದೂರವಾಣಿ 22253500/ 22260554 ಅಥವಾ clm-lm-ka@nic.in ಇ ಮೇಲ್‌ ವಿಳಾಸಕ್ಕೆ ದೂರುಗಳನ್ನು ನೀಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT