ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪ್ತಿ ವಾಹನಗಳ ವಿವರ ಒದಗಿಸಲು ನಿರ್ದೇಶನ

Last Updated 23 ಏಪ್ರಿಲ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ವಶಪಡಿಸಿಕೊಂಡ ಹಾಗೂ ಜಪ್ತಿ ಮಾಡಿದ ವಾಹನಗಳ ವಿವರಕ್ಕೆ ಸಂಬಂಧಿಸಿದ ಸಮಗ್ರ ವರದಿಯನ್ನು ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಓಲಾ ಟ್ಯಾಕ್ಸಿ ಸೇವೆ ಒದಗಿಸುವ ‘ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುಜಾತ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಮೆಮೊ ಸಲ್ಲಿಸಿ, ‘ರ‌್ಯಾಪಿಡೊ ಕಂಪನಿ ರಸ್ತೆ ಸಾರಿಗೆ ಮತ್ತು ಸುರಕ್ಷತೆ ಕಾಯ್ದೆ ಉಲ್ಲಂಘಿಸಿದೆ. ಈ ಕುರಿತು ನೋಟಿಸ್‌ ನೀಡಿದರೂ ಅದನ್ನು ಪರಿಗಣಿಸಿಲ್ಲ. ಈ ಕಾರಣಕ್ಕಾಗಿ ಮಾರ್ಚ್‌ 2019ರ ವರೆಗೆ 252 ಟ್ಯಾಕ್ಸಿ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

ಇದನ್ನು ಆಲಿಸಿದ ನ್ಯಾಯಪೀಠ, ಈ ಕುರಿತ ಸಂಪೂರ್ಣ ವಿವರ ಒದಗಿಸುವಂತೆ ಸೂಚಿಸಿ ವಿಚಾರಣೆಯನ್ನು ಬೇಸಿಗೆ ರಜೆಯ ನಂತರಕ್ಕೆ ನಿಗದಿಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT